ಹೆಬ್ರಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರ ಹೆಬ್ರಿ, ನೆಹರು ಯುವ ಕೇಂದ್ರ ಉಡುಪಿ ಹಾಗೂ ಭಗತ್ ಸಿಂಗ್ ಯುವ ವೇದಿಕೆ ಹೆಬ್ರಿ ಇವರ ಸಂಯುಕ್ತ ಆಶ್ರಯದಲ್ಲಿ ಪರ್ಸನಾಲಿಟಿ ಡೆವಲಪ್ಮೆಂಟ್ ಮತ್ತು ಕರಿಯರ್ ಪ್ಲಾನಿಂಗ್ ಎಂಬ ವಿಷಯದ ಮೇಲೆ ಒಂದು ದಿನದ ಕಾರ್ಯಾಗಾರ ನಡೆಯಿತು.
ನಿವೃತ್ತ ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ನಿರ್ದೇಶಕರಾದ ಸೀತಾನದಿ ವಿಠ್ಠಲ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಯುವಜನತೆ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಾಗಾರಗಳಲ್ಲಿ ಕಲಿಕೆಯ ಮುಖೇನ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ಉಜ್ವಲ ಭವಿಷ್ಯವನ್ನು ನಿರ್ಮಿಸಿಕೊಳ್ಳುವಂತೆ ಕರೆ ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಸಾದ್ ರಾವ್ ಎಂ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಹೆಬ್ರಿ ಕಾಲೇಜು ಅನೇಕ ವಿದ್ಯಾರ್ಥಿಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು ಕಾಲೇಜಿನ ಎಲ್ಲಾ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಹಿರಿಯ ವಿದ್ಯಾರ್ಥಿಗಳು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಸಹಕಾರವನ್ನು ಸ್ಮರಿಸಿದರು.
ಪ್ರಾಸ್ತಾವಿಕ ಮಾತುಗಳನ್ನಾಡಿದ ಉಡುಪಿಯ ನೆಹರು ಯುವ ಕೇಂದ್ರದ ನಿರ್ದೇಶಕರಾದ ವಿಲ್ಫ್ರೆಡ್ ಡಿಸೋಜ, ಕಾರ್ಯಕ್ರಮದ ಉದ್ದೇಶಗಳ ಬಗ್ಗೆ ವಿವರಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಾಲೇಜಿನ ಅಭಿವೃದ್ಧಿ ಸಮಿತಿಯ ಸದಸ್ಯರಾದ ದಿನೇಶ್ ಶೆಟ್ಟಿ ಹೊಸೂರು, ಹೆಬ್ರಿ ಭಗತ್ ಸಿಂಗ್ ವೇದಿಕೆ ಅಧ್ಯಕ್ಷರಾದ ವಿಜಯ ಹೆಗ್ಡೆ ಭಾಗವಹಿಸಿದ್ದರು.
ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಹಾಗೂ ಸ್ನಾತಕೋತ್ತರ ವಿಭಾಗದ ಸಂಯೋಜಕರಾದ ಡಾ ಗಣಪತಿ ಹೆಚ್ ಎ, ಐಕ್ಯೂಎಸಿ ಸಂಚಾಲಕರಾದ ವಿಷ್ಣುಮೂರ್ತಿ ಪ್ರಭು, ಉದ್ಯೋಗ ಮಾಹಿತಿ ಕೋಶದ ಸಂಚಾಲಕರಾದ ವಿಘ್ನೇಶ್ವರ ರಾವ್, ಪ್ರದೀಪ್ ಎ ಎಸ್ ಉಪಸ್ಥಿತರಿದ್ದರು.
ಮಣಿಪಾಲ ಮಾಹೆಯ ಸ್ಟೂಡೆಂಟ್ ಕೌನ್ಸಿಲರ್ ರಾಯನ್ ಮತಾಯಸ್ ಪ್ರೊಫೆಷನಲ್ ಕಾಂಪೇಟೆನ್ಸಿಸ್ & ಎಮೋಷನಲ್ ಇಂಟೆಲಿಜೆಂಟ್ಸ್, ಲಕ್ಷ್ಮಿ ಸೋಮ ಬಂಗೇರ ಪ್ರಥಮ ದರ್ಜೆ ಕಾಲೇಜು ಕೋಟ ಪಡುಕರೆ ಇಲ್ಲಿಯ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪ್ರಶಾಂತ್ ನೀಲಾವರ ‘ಕಾಂಪಿಟಿಟಿವ್ ಎಕ್ಸಾಮಿನೇಷನ್ಸ್ & ಕೆರಿಯರ್ ಅಪಾರ್ಚುನಿಟಿಸ್ ಇನ್ ಕಾಮರ್ಸ್ & ಹ್ಯುಮ್ಯಾನಿಟೀಸ್’, ಕಾರ್ಕಳ ಎಂಪಿಎಂ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನಿರ್ವಹಣಾಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಸುಬ್ರಮಣ್ಯ ಕೆ.ಸಿ ‘ಕಾರ್ಪೊರೇಟ್ ಸ್ಕಿಲ್ಸ್’ ವಿಷಯದ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಾಗಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
ಕಾರ್ಯಾಗಾರದಲ್ಲಿ ಪೂರ್ಣಪ್ರಜ್ಞ ಕಾಲೇಜು ಉಡುಪಿ, ಸರಕಾರಿ ಪ್ರಥಮ ದರ್ಜೆ ಕಾಲೇಜು ಕಾರ್ಕಳ, ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರ ತೆಂಕನಿಡಿಯೂರು, ಸರಕಾರಿ ಪ್ರಥಮ ದರ್ಜೆ ಕಾಲೇಜು ಶಂಕರನಾರಾಯಣ, ಕ್ರಾಸ್ಲ್ಯಾಂಡ್ ಕಾಲೇಜು ಬ್ರಹ್ಮಾವರ, ಸರಕಾರಿ ಪ್ರಥಮ ದರ್ಜೆ ಕಾಲೇಜು ಹಿರಿಯಡ್ಕ, ಸರಕಾರಿ ಪ್ರಥಮ ದರ್ಜೆ ಕಾಲೇಜು ಮುನಿಯಾಲು ಇಲ್ಲಿಯ ವಿದ್ಯಾರ್ಥಿಗಳು ಒಳಗೊಂಡಂತೆ ಒಟ್ಟು 130 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ವಾಣಿಜ್ಯ ವಿಭಾಗದ ಉಪನ್ಯಾಕರಾದ ರವಿರಾಜ್ ಭಟ್, ಪ್ರಶಾಂತ್ ಕೆಪಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಕೆ ಶಿವಾನಿ ದ್ವಿತೀಯ ಎಂಕಾಂ ಹಾಗೂ ವಿದ್ಯಾ ಎ.ಸಿ ದ್ವಿತೀಯ ಎಂ ಕಾಂ ಕಾರ್ಯಕ್ರಮ ನಿರೂಪಿಸಿದರು. ಶ್ರುತಿ ಮತ್ತು ತಂಡ ಪ್ರಥಮ ಎಂ ಕಾಂ ಪ್ರಾರ್ಥನೆಯನ್ನು ನೆರವೇರಿಸಿದರು. ಶ್ರೀಧ ಅಡಿಗ, ಅನುಷ ಕೆ ಸಿ, ಸುರಕ್ಷಾ ಶೆಟ್ಟಿ, ಇಂಚರ, ಮೇದಿನಿ, ಸುಮಂತ್ ಎಂ, ಮಂಜುನಾಥ್, ರಜತ್, ಚೈತನ್ಯ ದ್ವಿತೀಯ ಎಂ ಕಾಂ ಹಾಗೂ ಇತರ ವಿದ್ಯಾರ್ಥಿಗಳು ಸಹಕರಿಸಿದರು.