ಉಡುಪಿ: ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಬುಧವಾರ ಉಡುಪಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಿದರು.
ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಸದಾನಂದ ಉಪ್ಪಿನಕುದ್ರು, ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಶ್ರೀಶ ನಾಯಕ್, ಸುಪ್ರಸಾದ್ ಶೆಟ್ಟಿ, ಉಡುಪಿ ನಗರಸಭಾ ಅಧ್ಯಕ್ಷೆ ಸುಮಿತ್ರಾ ನಾಯಕ್ ಹಾಗೂ ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಹಾಗೂ ಮಂಡಲಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಪಕ್ಷದ ಪ್ರಮುಖರು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.