ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ 2022-23ನೇ ಸಾಲಿನ ಬಜೆಟ್ ಸರ್ವಸ್ಪರ್ಶಿ ಸರ್ವವ್ಯಾಪಿ ಧ್ಯೇಯದೊಂದಿಗೆ ಜನಪರವಾಗಿದ್ದು ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಸರ್ವರಿಗೂ ಸಮಪಾಲು ಸಮಬಾಳು ಸಿದ್ದಾಂತದಲ್ಲಿ ಬಜೆಟ್ ಮಂಡಿಸಿದ್ದಾರೆ.
ಕರಾವಳಿ ಜಿಲ್ಲೆಯ ಮೀನುಗಾರಿಕೆ ಬಂದರು ಅಭಿವೃದ್ಧಿಗೆ ಗರಿಷ್ಠ ಅನುದಾನ, ವಸತಿ ರಹಿತ ಮೀನುಗಾರರಿಗೆ 5000 ವಸತಿ ನಿರ್ಮಾಣ, ಮತ್ಸ್ಯ ಸಿರಿ ಯೋಜನೆಯ ಮೂಲಕ ಅಳ ಸಮುದ್ರ ಮೀನುಗಾರಿಕೆ ಉತ್ತೇಜನ ನೀಡಲು ಮುಂದಾಗಿರುವುದು ಶ್ಲಾಘನೀಯ.
ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತರ ಗೌರವಧನ ಹೆಚ್ಚಳ, ಶ್ರೀ ನಾರಾಯಣ ಗುರು ವಸತಿ ಶಾಲೆಗಳ ನಿರ್ಮಾಣ, ಕಡಲ ತೀರದ ಪ್ರವಾಸೋದ್ಯಮ ಉತ್ತೇಜನಕ್ಕೆ ಮಾನದಂಡಗಳ ಸರಳೀಕರಣ, ಕಾರವಾರದಲ್ಲಿ ರಾಜ್ಯದ ಮೊದಲ ಜಲಸಾರಿಗೆ ಮತ್ತು ಮೀನುಗಾರಿಕೆ ತರಬೇತಿ ಸಂಸ್ಥೆ ಸ್ಥಾಪನೆ, ಯಶಸ್ವಿನಿ ಆರೋಗ್ಯ ವಿಮಾ ಯೋಜನೆ ಮರುಜಾರಿ, ಗೋ ಶಾಲೆಗಳ ಗೋವು ದತ್ತು ಪ್ರೋತ್ಸಾಹ ನೀಡುವ ದೃಷ್ಟಿಯಿಂದ ಪುಣ್ಯ ಕೋಟಿ ದತ್ತು ಯೋಜನೆಗೆ ಚಾಲನೆ, ರಾಷ್ಟ್ರೀಯ ಶಿಕ್ಷಣ ನೀತಿ ಪರಿಣಾಮಕಾರಿ ಅನುಷ್ಠಾನಕ್ಕೆ ಪೂರಕವಾಗಿ ಶಾಲಾ ಕಾಲೇಜುಗಳ ಉನ್ನತೀಕರಣಕ್ಕೆ ಅನುದಾನ ಒದಗಿಸುವ ಮೂಲಕ ಜನಪರ ಬಜೆಟ್ ಮಂಡಿಸಿದ ಮುಖ್ಯಮಂತ್ರಿಗಳಿಗೆ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ ಅಭಿನಂದನೆ ಸಲ್ಲಿಸಿದ್ದಾರೆ.