ಉಡುಪಿ: ಕೇಂದ್ರ ಅಥವಾ ರಾಜ್ಯ ಸರಕಾರದ ಮುಂಗಡ ಪತ್ರದ ಕುರಿತಾದ ತಿಳುವಳಿಕೆಯು ಪ್ರತಿಯೊಬ್ಬ ನಾಗರಿಕನಿಗೂ ಅಗತ್ಯ. ಅದು ನಾಗರಿಕ ಪ್ರಜ್ಞೆಯ ಭಾಗ. ಅದರಲ್ಲೂ ವಿದ್ಯಾರ್ಥಿಗಳಿಗೆ ಇದು ಅತಿ ಅಗತ್ಯ.
ದೇಶದ ಅಭಿವೃದ್ಧಿ ಪ್ರಕ್ರಿಯೆಯನ್ನು ತಿಳಿದುಕೊಳ್ಳಲು ಮುಂಗಡ ಪತ್ರದ ಅರಿವು ಪೂರಕ ಎಂದು ಖ್ಯಾತ ಲೆಕ್ಕ
ಪರಿಶೋಧಕರಾದ ಶ್ರೀಧರ್ ಕಾಮತ್ ಹೇಳಿದರು.
ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ಸ್ನಾತಕೋತ್ತರ ಅಧ್ಯಯನ ಕೇಂದ್ರ ಇಲ್ಲಿನ ವಾಣಿಜ್ಯಶಾಸ್ತ್ರ ಮತ್ತು ಅರ್ಥಶಾಸ್ತ್ರ ವಿಭಾಗದ ಆಶ್ರಯದಲ್ಲಿ ನಡೆದ ಕೇಂದ್ರ ಸರಕಾರದ 2022ರ ಮುಂಗಡ ಪತ್ರದ ಕುರಿತಾಗಿ ವಿಶೇಷ ಉಪನ್ಯಾಸ ನೀಡಿದರು.
ಮುಂಗಡ ಪತ್ರ ತಯಾರಿಯ ವಿವಿಧ ಹಂತಗಳು ಹಾಗೂ ಈ ವರ್ಷದ ಮುಂಗಡ ಪತ್ರ ವೈಶಿಷ್ಟ್ಯಗಳನ್ನು ಪರಿಚಯಿಸಿದರು.
ಕಾಲೇಜಿನ ಪ್ರಾಂಶುಪಾಲ ಡಾ. ಗಣನಾಥ ಎಕ್ಕಾರು ಅಧ್ಯಕ್ಷತೆ
ವಹಿಸಿದ್ದರು. ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರಾದ ಪ್ರೊ.
ತಿಮ್ಮಣ್ಣ ಜಿ. ಭಟ್ ಪ್ರಸ್ತಾವನೆಯೊಂದಿಗೆ ಅತಿಥಿಗಳನ್ನು
ಪರಿಚಯಿಸಿದರು.
ಐ.ಕ್ಯೂ.ಎ.ಸಿ. ಸಂಚಾಲಕ ಡಾ. ಸುರೇಶ್ ರೈ ಕೆ., ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಗೋಪಾಲಕೃಷ್ಣ ಎಂ.
ಗಾಂವ್ಕರ್, ಸಂಖ್ಯಾಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರೊ. ಉಮೇಶ್ ಪೈ ಉಪಸ್ಥಿತರಿದ್ದರು.
ದ್ವಿತೀಯ ಎಂ.ಎ. ವಿದ್ಯಾರ್ಥಿನಿ ಸಮೀಕ್ಷಾ ಪ್ರಾರ್ಥಿಸಿ, ಎಂ.ಕಾಂ. ವಿದ್ಯಾರ್ಥಿನಿ ಪ್ರಣೀತ ಸ್ವಾಗತಿಸಿದರು. ಕೀರ್ತನಾ
ವಂದಿಸಿದರು. ರೈನಾ ಡಿ’ಸೋಜ ನಿರೂಪಿಸಿದರು.
ಬಳಿಕ ಮುಂಗಡ ಪತ್ರದ ಬಗ್ಗೆ ಚರ್ಚೆ ನಡೆಯಿತು.