ಕೋಟ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನಕ್ಕೆ ವಿಶೇಷ ಮನ್ನಣೆಯಿದೆ. ಪ್ರತಿಯೊಬ್ಬ ನಾಗರಿಕನು ಸಂವಿಧಾನದ ಮಹತ್ವ ಅರಿತುಕೊಳ್ಳುವುದು ಅವಶ್ಯವಾಗಿದೆ. ರಂಗಭೂಮಿ ಮೂಲಕ ಸಂವಿಧಾನದ ಅರಿವು ಮೂಡಿಸುತ್ತಿರುವ ಕೆಲಸ ಶ್ಲಾಘನೀಯ ಎಂದು ಲಕ್ಷ್ಮೀ ಸೋಮ ಬಂಗೇರ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ನಿತ್ಯಾನಂದ ಗಾಂವಕರ್ ಅವರು ಹೇಳಿದರು.
ಅವರು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ ನಲ್ಲಿ ಡಾ. ಶಿವರಾಮ ಕಾರಂತ ಪ್ರತಿಷ್ಠಾನ(ರಿ)ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ (ರಿ) ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ಆಶ್ರಯದಲ್ಲಿ ಲಕ್ಷ್ಮೀ ಸೋಮ ಬಂಗೇರ ಪ್ರಥಮ ದರ್ಜೆ ಕಾಲೇಜು ಮಣೂರು-ಪಡುಕರೆ ಸಹಯೋಗದಲ್ಲಿ ರಂಗಾಯಣ ಶಿವಮೊಗ್ಗ ಕಲಾವಿದರ ವಿ ದ ಪೀಪಲ್ ಆಫ್ ಇಂಡಿಯಾ ನಾಟಕ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ನಾಟಕದ ಮೂಲಕ ಮೂಲೆ ಮೂಲೆಯಲ್ಲೂ ಸಂವಿಧಾನದ ಕುರಿತು ಅರಿವು ಮೂಡಿಸುತ್ತಿರುವುದು ಸಂತಸದ ವಿಷಯ. ನಿರಂತರವಾಗಿ ಇದು ಸಾಗಿ ಪ್ರತಿಯೊಬ್ಬರು ಸಂವಿಧಾನದ ಮಹತ್ವ ಅರಿತು ಸದೃಢ ಸಮಾಜದ ಶಿಲ್ಪಿಗಳಾಗೋಣ ಎಂದು ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್ ಅವರು ಹೇಳಿದರು.
ವೇದಿಕೆಯಲ್ಲಿ ಕೋಟತಟ್ಟು ಗ್ರಾಮ ಪಂಚಾಯತ ಉಪಾಧ್ಯಕ್ಷ
ವಾಸು ಪೂಜಾರಿ, ಬ್ರಹ್ಮಾವರ ತಾಲೂಕು ಕ.ಸಾ.ಪ ಅಧ್ಯಕ್ಷ
ರಾಮಚಂದ್ರ ಐತಾಳ್, ಸಂಘಟಕ ಪ್ರಸಾದ್ ಬಿಲ್ಲವ, ರಂಗಾಯಣ ತಂಡದ ನಾಟಕ ಸಂಚಾಲಕರಾದ ಶೈಲೇಶ್ ತೀರ್ಥಹಳ್ಳಿ, ಲಕ್ಷ್ಮೀ ಸೋಮ ಬಂಗೇರ ಪ್ರಥಮ ದರ್ಜೆ ಕಾಲೇಜಿನ ಗ್ರಂಥಾಪಾಲಕ ಕೃಷ್ಣ ಸಾಸ್ತಾನ, ಹಾಗೂ ಕಾಲೇಜಿನ ಪ್ರಾಧ್ಯಾಪಕ ವೃಂದದವರು, ಕೋಟತಟ್ಟು ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ
ಪ್ರಸ್ತಾಪಿಸಿ ನಿರೂಪಿಸಿದರು.