ನವದೆಹಲಿ: ಉತ್ತರ ಪ್ರದೇಶದಲ್ಲಿ ಒಟ್ಟು 403 ಸ್ಥಾನಗಳ ಪೈಕಿ ಆಡಳಿತಾರೂಢ ಬಿಜೆಪಿ 270 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಎಸ್.ಪಿ ಮತ್ತು ಮಿತ್ರ ಪಕ್ಷಗಳು 128 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು ಕಾಂಗ್ರೆಸ್ 2, ಬಿ.ಎಸ್.ಪಿ 1 ಹಾಗೂ ಇತರರು 2 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ.
ಗೋವಾದಲ್ಲಿ 40 ಸ್ಥಾನಗಳಲ್ಲಿ ಬಿಜೆಪಿ 20 ರಲ್ಲಿ ಮುನ್ನಡೆ, ಕಾಂಗ್ರೆಸ್ 11, ಆಮ್ ಆದ್ಮಿ ಪಕ್ಷ 2, ಇತರರು 7 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಮಣಿಪುರದಲ್ಲಿ ಬಿಜೆಪಿ 28 ಮುನ್ನಡೆ, ಕಾಂಗ್ರೆಸ್ 9, ಎನ್.ಪಿ.ಪಿ 11 ಮುನ್ನಡೆ ಸಾಧಿಸಿದೆ.
ಉತ್ತರಾಖಂಡದಲ್ಲಿ ಬಿಜೆಪಿ 43, ಕಾಂಗ್ರೆಸ್ 23, ಇತರರು 4 ರಲ್ಲಿ ಮುನ್ನಡೆ.
ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ 89 , ಬಿಜೆಪಿ + 2, ಕಾಂಗ್ರೆಸ್ 20, ಎಸ್.ಎ.ಡಿ 6 ರಲ್ಲಿ ಮುನ್ನಡೆ ಸಾಧಿಸಿದೆ.