ಉಡುಪಿ: ತೋಟಗಾರಿಕೆ ಇಲಾಖೆಯ ವತಿಯಿಂದ ರೈತರ ಮಕ್ಕಳಿಗೆ 10 ತಿಂಗಳ ತರಬೇತಿ ಕಾರ್ಯಕ್ರಮವನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದು, ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ಸಾಮಾನ್ಯ ವರ್ಗದ 6 ಹಾಗೂ ಪರಿಶಿಷ್ಟ ಜಾತಿಯ 1 ಒಟ್ಟು 7 ಅಭ್ಯರ್ಥಿಗಳ ಗುರಿ ಇದ್ದು, ಸದರಿ ಗುರಿಯಲ್ಲಿ 5 ಪುರುಷ ಹಾಗೂ 2 ಮಹಿಳೆಯರಿಗೆ ಮೀಸಲಿರುತ್ತದೆ. ಕನಿಷ್ಠ 18 ವರ್ಷದೊಳಗಿನ ಹಾಗೂ ಗರಿಷ್ಠ ಸಾಮಾನ್ಯ ಅಭ್ಯರ್ಥಿಗಳಿಗೆ 30 ವರ್ಷ, ಪ.ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ 33 ಹಾಗೂ 33-65 ವರ್ಷದೊಳಗಿನ ಮಾಜಿ ಸೈನಿಕರು ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಏಪ್ರಿಲ್ 16 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವAತೆ ತೋಟಗಾರಿಕಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.