ನವದೆಹಲಿ: ಪಾಕಿಸ್ತಾನದ ಮಿಯಾನ್ ಚನ್ನು ಪ್ರದೇಶದಲ್ಲಿ ಮಾರ್ಚ್ 9 ರಂದು ಭಾರತ ಕ್ಷಿಪಣಿ ದಾಳಿ ನಡೆಸಿದೆ ಎಂದು ಪಾಕಿಸ್ತಾನ ಸೇನೆ ಪತ್ರಿಕಾಗೋಷ್ಠಿಯ ಮೂಲಕ ಹೇಳಿಕೆ ನೀಡಿದೆ.
ತಾಂತ್ರಿಕ ದೋಷದಿಂದ ಕ್ಷಿಪಣಿ ದಾಳಿ ನಡೆದಿದೆ. ಘಟನೆಯಿಂದ ಯಾವುದೇ ಸಾವು ಸಂಭವಿಸಿಲ್ಲ. ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸುತ್ತಿದ್ದೇವೆ ಎಂದು ಭಾರತ ಸರ್ಕಾರದ ರಕ್ಷಣಾ ಸಚಿವಾಲಯ ಹೇಳಿಕೆ ನೀಡಿದ್ದು, ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲು ಆದೇಶಿಸಿದೆ.