Friday, November 22, 2024
Friday, November 22, 2024

ಹಿಜಾಬ್ ಬಗ್ಗೆ ಸುಪ್ರೀಂಕೋರ್ಟ್ ತೀರ್ಪು ಬರುವವರೆಗೂ ಮುಸ್ಲಿಂ ಸಂಘಟನೆಗಳು ಬಂದ್ ಮುಂದುವರೆಸಲಿ: ಯಶ್ಪಾಲ್ ಸುವರ್ಣ ಆಕ್ರೋಶ

ಹಿಜಾಬ್ ಬಗ್ಗೆ ಸುಪ್ರೀಂಕೋರ್ಟ್ ತೀರ್ಪು ಬರುವವರೆಗೂ ಮುಸ್ಲಿಂ ಸಂಘಟನೆಗಳು ಬಂದ್ ಮುಂದುವರೆಸಲಿ: ಯಶ್ಪಾಲ್ ಸುವರ್ಣ ಆಕ್ರೋಶ

Date:

ಉಡುಪಿ: ಹಿಜಾಬ್ ವಿಚಾರದಲ್ಲಿ ರಾಜ್ಯ ಹೈಕೋರ್ಟ್ ನೀಡಿರುವ ತೀರ್ಪನ್ನು ವಿರೋಧಿಸಿ ಮುಸ್ಲಿಂ ಸಂಘಟನೆಗಳು ಕರೆ ನೀಡಿರುವ ಬಂದ್ ಬೆಂಬಲಿಸಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ನ್ಯಾಯಾಂಗ ನಿಂದನೆ ಮಾಡಿರುವ ಅಂಗಡಿ ಮಾಲೀಕರು ಸುಪ್ರೀಂಕೋರ್ಟ್ ತೀರ್ಪಿನವರೆಗೂ ಬಂದ್ ಮುಂದುವರೆಸಲಿ ಎಂದು ಬಿಜೆಪಿ ಮುಖಂಡ ಯಶ್ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂವಿಧಾನಾತ್ಮಕ ತಳಹದಿಯಲ್ಲಿ ರಾಜ್ಯದ ಹೈಕೋರ್ಟ್ ತ್ರಿಸದಸ್ಯ ಪೀಠದ ಹಿಜಾಬ್ ಪ್ರಕರಣದ ತೀರ್ಪನ್ನು ಬಹಿರಂಗವಾಗಿ ವಿರೋಧಿಸಿ ದೇಶದ ನ್ಯಾಯಾಂಗ ವ್ಯವಸ್ಥೆಗೆ ಅಪಮಾನ ಮಾಡುವ ಮೂಲಕ ಭಾರತದ ಕಾನೂನಿಗೆ ತಲೆಬಾಗುವುದಿಲ್ಲ ಎಂದು ಉದ್ಧಟತನ ಮೆರೆಯುವ ಮೂಲಕ ರಾಷ್ಟ್ರ ವಿರೋಧಿಗಳ ಮುಖವಾಡ ಸಮಾಜದ ಮುಂದೆ ಕಳಚಿಬಿದ್ದಿದೆ.

ಹಿಜಾಬ್ ವಿವಾದದ ಮೂಲಕ ದೇಶದ ಶಿಕ್ಷಣ ವ್ಯವಸ್ಥೆ ಮತ್ತು ಶಾಂತಿ ಸುವ್ಯವಸ್ಥೆ ಹದಗೆಡಿಸುವ ನಿಟ್ಟಿನಲ್ಲಿ ಮತಾಂಧ ಶಕ್ತಿಗಳ ಪ್ರಯತ್ನಕ್ಕೆ ಹೈಕೋರ್ಟ್ ತೀರ್ಪು ತಡೆಯೊಡ್ಡಿದ್ದು, ಇದರಿಂದ ಭ್ರಮನಿರಸನಗೊಂಡು ಮತೀಯವಾದಿಗಳು ಬಂದ್ ಕರೆ ನೀಡಿದ್ದಾರೆ. ಈ ಮತಾಂಧ ರಾಷ್ಟ್ರ ವಿರೋಧಿಗಳ ಬಗ್ಗೆ ಬಹುಸಂಖ್ಯಾತ ಹಿಂದೂ ಸಮಾಜ ಜಾಗೃತೆ ವಹಿಸಿ, ಈ ಮನಸ್ಥಿತಿಯವರೊಂದಿಗೆ ಆರ್ಥಿಕ ವ್ಯವಹಾರಗಳನ್ನು ನಿರ್ಬಂಧಿಸಿ ತಕ್ಕ ಉತ್ತರ ನೀಡುವ ಸಮಯ ಬಂದಿದೆ.

ಈ ನೆಲದ ಕಾನೂನಿಗೆ ಆಗೌರವ ತೋರುವ ಮೂಲಕ ಬಹುಸಂಖ್ಯಾತ ಹಿಂದುಗಳ ಭಾವನೆಗಳಿಗೆ ಘಾಸಿ ಮಾಡುವವರಿಗೆ ಹಿಂದೂ ದೇಗುಲ ಮಂದಿರಗಳ ಧಾರ್ಮಿಕ ಸಮಾರಂಭಗಳಲ್ಲೂ ವ್ಯಾಪಾರ ವ್ಯವಹಾರ ಬಹಿಷ್ಕರಿಸಲು ಸಮಸ್ತ ಹಿಂದೂ ಸಮಾಜ ಮುಂದಾಗುವ ಕಾಲ ನಿರ್ಮಾಣವಾಗಿದ್ದು ಈ ಮೂಲಕ ಮತಾಂಧರಿಗೆ ದಿಟ್ಟ ಉತ್ತರ ನೀಡಲು ಸಾಧ್ಯ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಂತರ ಇಲಾಖಾ ಸಮನ್ವಯ ಸಮಿತಿ ಸಭೆ

ಉಡುಪಿ, ನ.21: ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನದ ಕುರಿತು ತಾಲೂಕು ಮಟ್ಟದ...

ಜಿಲ್ಲಾಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ

ಉಡುಪಿ, ನ.21: ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ ವಾಣಿಜ್ಯ ಮೇಳ-2025 ರ...

ನ.22: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ನ.21: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ನವೆಂಬರ್...

ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ

ಉಡುಪಿ, ನ.21: ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಹಾಗೂ ಮೈಸೂರಿನ ಭಾರತೀಯ...
error: Content is protected !!