ಕಾರ್ಕಳ: ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್, ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಅಬ್ಬನಡ್ಕ, ಜೆಸಿಐ ಬೆಳ್ಮಣ್ಣು, ಯುವ ಜೇಸಿ ವಿಭಾಗ ಬೆಳ್ಮಣ್ಣು ಮುಂದಾಳತ್ವದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಜೈ ತುಲುನಾಡ್ (ರಿ) ಕಾರ್ಕಳ ಘಟಕದ ಸಂಯುಕ್ತ ಆಶ್ರಯದಲ್ಲಿ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ನ ರಂಗಮಂದಿರದಲ್ಲಿ ನಡೆದ “ಬಲೆ ತುಳು ಲಿಪಿ ಕಲ್ಪುಗ” ಕಾರ್ಯಕ್ರಮದ ಉದ್ಘಾಟನೆ ನಡೆಯಿತು. ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ ನಂದಳಿಕೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬೆಳ್ಮಣ್ಣು ಜೇಸಿಐನ ಅಧ್ಯಕ್ಷರಾದ ವೀಣೇಶ್ ಅಮೀನ್ ಅವರು ಮಾತನಾಡಿ, ಸಾವಿರಾರು ವರ್ಷಗಳ ಸುರ್ದೀಘ ಇತಿಹಾಸವಿರುವ ತುಳು ಭಾಷೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರದ್ದು ಎಂದು ಹೇಳಿದರು. ಮುಖ್ಯ ಅತಿಥಿಯಾಗಿ ಜೈ ತುಳುನಾಡ್ ಘಟಕದ ಜೊತೆ ಕಾರ್ಯದರ್ಶಿ ರಾಜೇಶ್ ತುಳುವೆ, ಬೆಳ್ಮಣ್ಣು ಜೇಜೇಸಿ ಅಧ್ಯಕ್ಷ ವೈಶಾಖ್ ಹೆಬ್ಬಾರ್, ತುಳು ಲಿಪಿ ಶಿಕ್ಷಕರಾದ ಪ್ರಶಾಂತ್ ಪೂಜಾರಿ, ಮೇಘನಾ, ಕನ್ನಡದ ಮೊದಲ ಮಹಿಳಾ ಸಂಘಟನಾ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ ಉಪಸ್ಥಿತರಿದ್ದರು.
ನಂದಳಿಕೆ ಅಬ್ಬನಡ್ಕ ಕ್ಲಬ್’ನ ಅಧ್ಯಕ್ಷ ಪ್ರಶಾಂತ್ ಪೂಜಾರಿ ಸ್ವಾಗತಿಸಿದರು. ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಸುರೇಶ್ ಕಾಸ್ರಬೈಲು ವಂದಿಸಿದರು.