Tuesday, November 26, 2024
Tuesday, November 26, 2024

ತುಳು ಲಿಪಿ ನಾಮಫಲಕ ಲೋಕಾರ್ಪಣೆ

ತುಳು ಲಿಪಿ ನಾಮಫಲಕ ಲೋಕಾರ್ಪಣೆ

Date:

ಮಂಗಳೂರು: ಮಂಗಳಾದೇವಿ ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿ ತುಳು ಲಿಪಿಯ ನಾಮಫಲಕವನ್ನು ಶಾಸಕ ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಶಾಸಕ ಕಾಮತ್, ಕೆಲವು ಸಮಯದ ಹಿಂದೆ ತುಳು ಸಂಘಟನೆಯೊಂದರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಶಿಶ್ಮಿತ ಎನ್ಮುವ ಪುಟ್ಟ ಹುಡುಗಿ ಮಂಗಳದೇವಿ ದೇವಸ್ಥಾನಕ್ಕೆ ಹೋಗುವ ದಾರಿಯಲ್ಲಿ ತುಳು ಲಿಪಿಯ ನಾಮಫಲಕ ಅಳವಡಿಸುವಂತೆ ಸ್ವತಃ ತಾನೇ ತುಳು ಲಿಪಿಯಲ್ಲಿ ಮನವಿ ಬರೆದು ನೀಡಿದ್ದಳು.

ಆಕೆಯ ಕೋರಿಕೆಯಂತೆ ಮಂಗಳಾದೇವಿ ದೇವಸ್ಥಾನ ರಸ್ತೆಗೆ ತುಳುವೆರ್ ಕುಡ್ಲ‌ ಸಂಘಟನೆಯ ಸಹಯೋಗದೊಂದಿಗೆ ನಾಮಫಲಕ ಅಳವಡಿಸಿ ಇಂದು ಶಿಶಿತಾಳ ಕೈಯಲ್ಲಿ ಉದ್ಘಾಟಿಸಿದ್ದೇವೆ ಎಂದರು.

ತುಳು ಭಾಷೆಗೆ ಮಾನ್ಯತೆ ನೀಡುವ ಕುರಿತು ಈಗಾಗಲೇ ಪ್ರಯತ್ನಗಳು ನಡೆಯುತ್ತಿವೆ. ಹಾಗೆಯೇ ತುಳು ಲಿಪಿಯ ಕುರಿತು ಸಾಕಷ್ಟು ಪ್ರಮಾಣದಲ್ಲಿ ಪ್ರಚಾರ ನೀಡುವ ಅವಶ್ಯಕತೆ ಇರುವ ಕಾರಣ ಇಂತಹ ಕಾರ್ಯಗಳಿಗೆ ಪ್ರೋತ್ಸಾಹ ನೀಡುತ್ತಿದ್ದೇವೆ.

ತುಳು ಲಿಪಿಯ ಬಳಕೆ ಹೆಚ್ಚಾದಂತೆ ಭಾಷೆಯ ಉಳಿವಿಗೆ ಹೆಚ್ಚಿನ ಮಹತ್ವ ನೀಡಿದಂತಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪಾಲಿಕೆ ನಾಮ ನಿರ್ದೇಶಿತ ಸದಸ್ಯರಾದ ರಮೇಶ್ ಕಂಡೆಟ್ಟು, ತುಳುವೆರ್ ಕುಡ್ಲ‌ ಸಂಘಟನೆಯ ಪ್ರಮುಖರಾದ ಪ್ರತೀಕ್ ಪೂಜಾರಿ, ಸಂತೋಷ್ ಕುಮಾರ್, ರೋಷನ್ ರೊನಾಲ್ಡ್, ಅಕ್ಷಯ್ ಪೇಜಾವರ, ಚರಿತ್ ಪೂಜಾರಿ, ಜಯರಾಮ್ ಎಚ್, ಪ್ರತೀಕ್ ರಾವ್, ಪವನ್ ಕುಮಾರ್, ಸುಳೀಲ್ ಪಾಲನ್ನ, ದೀಕ್ಷಿತ್ ಬಿ, ವರುಣ್, ಯಾದವ್ ಕೋಟ್ಯಾನ್, ಅರ್ಜುನ್ ಬೋಳಾರ್, ಕದ್ರಿ ಕ್ರಿಕೇಟರ್ಸ್ ಪ್ರಮುಖರಾದ ಜಗದೀಶ್ ಕದ್ರಿ, ಆದಿತ್ಯ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಕಲಚೇತನರ ಸಪ್ತಾಹ ಉದ್ಘಾಟನೆ

ಉಡುಪಿ, ನ.26: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ...

ನಗರದ ಸ್ವಚ್ಛತೆಗೆ ಪೌರಕಾರ್ಮಿಕರ ಕೊಡುಗೆ ಅಮೂಲ್ಯ: ಶಾಸಕ ಯಶ್‌ಪಾಲ್ ಎ ಸುವರ್ಣ

ಉಡುಪಿ, ನ.26: ಸ್ವಚ್ಛತೆಯಲ್ಲಿ ಉಡುಪಿಯು ರಾಷ್ಟ್ರಮಟ್ಟದಲ್ಲಿ ಗುರುತಿಸಲು ಕಾರಣ ಜಿಲ್ಲೆಯ ಪೌರಕಾರ್ಮಿಕರು....

ರಥಬೀದಿ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಮಂಗಳೂರು, ನ.26: ಡಾ. ಪಿ. ದಯಾನಂದ ಪೈ-ಪಿ.ಸತೀಶ್ ಪೈ. ಸರ್ಕಾರಿ ಪ್ರಥಮ...

ಆಳ್ವಾಸ್ ಕಾಲೇಜಿನಲ್ಲಿ ಸಿನಿಮಾ ರಸಗ್ರಹಣ ಕಾರ್ಯಾಗಾರ

ವಿದ್ಯಾಗಿರಿ, ನ.26: ಗಾಳಿ, ನೀರು, ಅಗ್ನಿಯಷ್ಟೇ ‘ದೃಶ್ಯ-ಶ್ರವ್ಯ ಮಾಧ್ಯಮ’ವೂ ಬದುಕಿನ ಅವಿಭಾಜ್ಯ...
error: Content is protected !!