ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರತಿ 60 ಕಿ.ಮೀ ಮಿತಿಯಲ್ಲಿ ಒಂದೇ ಟೋಲ್ ಪ್ಲಾಜಾ ಕಾರ್ಯನಿರ್ವಹಿಸಲಿದೆ ಎಂದು ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಹೆಚ್ಚುವರಿ ಟೋಲ್ ಪ್ಲಾಜಾಗಳು ಇದ್ದಲ್ಲಿ ಮುಂದಿನ ಮೂರು ತಿಂಗಳಲ್ಲಿ ಅವುಗಳನ್ನು ತೆಗೆಯಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.