Saturday, September 21, 2024
Saturday, September 21, 2024

ರಾಷ್ಟ್ರ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

ರಾಷ್ಟ್ರ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

Date:

ಕಾರ್ಕಳ: ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಮತ್ತು ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂಡಳಿ ವತಿಯಿಂದ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನ ವೇದಿಕೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಭಾರತೀಯ
ಜೇಸಿಐನ ೨೦೨೧ನೇ ಸಾಲಿನ ವಲಯ ಹದಿನೈದರ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ವಲಯ ಉಪಾಧ್ಯಕ್ಷರಾದ ಸತ್ಯನಾರಾಯಣ ಭಟ್ ಅವರನ್ನು ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ವತಿಯಿಂದ ಸನ್ಮಾನಿಸಲಾಯಿತು.

ಸಮಾರಂಭದಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷ ಪ್ರಶಾಂತ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಜೇಸಿಐ ರಾಷ್ಟ್ರ‍ೀಯ ತರಬೇತುದಾರರಾದ ರಾಜೇಂದ್ರ ಭಟ್ ಅವರು ಅಭಿನಂದನಾ ಭಾಷಣ ಮಾಡಿದರು. ಬೆಳ್ಮಣ್ಣು ಜೇಸಿಐ ಅಧ್ಯಕ್ಷ ವೀಣೇಶ್ ಅಮೀನ್, ಮಾವಿನಕಟ್ಟೆ ಶ್ರೀ ಮಹಾಮ್ಮಾಯಿ ಭಜನಾ ಮಂಡಳಿಯ ಅಧ್ಯಕ್ಷರಾದ ಗಣಪತಿ ದೇವಾಡಿಗ ಹಾಗೂ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂಡಳಿಯ ಕುಣಿತ ಭಜನಾ ತರಬೇತುದಾರರಾದ
ರಾಜೇಂದ್ರ ಶೆಟ್ಟಿಗಾರ್, ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಭಜನಾ ಮಡಳಿಯ ಅಧ್ಯಕ್ಷೆ ಸುಲೋಚನಾ ಕೋಟ್ಯಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಸ್ಥಾಪಕಾಧ್ಯಕ್ಷ ವಿಠಲ ಮೂಲ್ಯ, ಗೌರವಾಧ್ಯಕ್ಷ ರಾಜು ಶೆಟ್ಟಿ, ಪೂರ್ವಾಧ್ಯಕ್ಷರಾದ ಪ್ರಕಾಶ್ ಆಚಾರ್ಯ, ರಘುವೀರ್ ಶೆಟ್ಟಿ, ಆನಂದ ಪೂಜಾರಿ, ದಿನೇಶ್ ಬೀರೊಟ್ಟು, ರಾಜೇಶ್ ಕೋಟ್ಯಾನ್, ಸತೀಶ್ ಪೂಜಾರಿ, ಉದಯ ಅಂಚನ್, ಬೆಳ್ಮಣ್ಣು ಜೇಸಿಐನ ಪೂರ್ವಾಧ್ಯಕ್ಷರಾದ ಸುರೇಶ್ ರಾವ್, ಸತೀಶ್ ಕೋಟ್ಯಾನ್, ದಿನೇಶ್ ಸುವರ್ಣ, ಸುಭಾಸ್ ಕುಮಾರ್, ಉಪಾಧ್ಯಕ್ಷೆ ಸರಿತಾ ಡಿ. ಸುವರ್ಣ, ಕಾರ್ಯದರ್ಶಿ ದೀಕ್ಷಿತ್ ದೇವಾಡಿಗ, ಕೋಶಾಧಿಕಾರಿ ಸಂದೀಪ್ ಕುಲಾಲ್, ನಿರ್ದೇಶಕ ಅವಿನಾಶ್ ಪೂಜಾರಿ, ಯುವ ಜೇಸಿ ಅಧ್ಯಕ್ಷ ವೈಶಾಖ್ ಹೆಬ್ಬಾರ್ ಮೊದಲಾದವರಿದ್ದರು.

ಮಹಿಳಾ ಸಂಘಟನಾ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ ಸ್ವಾಗತಿಸಿ, ಕಾರ್ಯದರ್ಶಿ ಸುರೇಶ್ ಕಾಸ್ರಬೈಲು ವಂದಿಸಿದರು. ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!