ಉಡುಪಿ: ಉಡುಪಿ ಭ್ರಷ್ಟಾಚಾರ ನಿಗ್ರಹ ದಳ ಪೋಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಮಾರ್ಚ್ 29 ರಂದು ಕುಂದಾಪುರ ಪ್ರವಾಸಿ ಮಂದಿರ ಮತ್ತು ಮಾರ್ಚ್ 30 ರಂದು ಕಾರ್ಕಳ ಪ್ರವಾಸಿ ಮಂದಿರದಲ್ಲಿ ಬೆಳಗ್ಗೆ 11 ರಿಂದ ಸಂಜೆ 4.30 ರ ವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.
ಸಾರ್ವಜನಿಕ ನೌಕರ ತನ್ನ ದಿನನಿತ್ಯದ ಕೆಲಸಗಳನ್ನು ನಿರ್ವಹಿಸಲು ಅನಗತ್ಯ ವಿಳಂಬ ಮಾಡಿದಲ್ಲಿ, ನಿರ್ಲಕ್ಷö್ಯತೆ ತೋರಿದಲ್ಲಿ ಅಥವಾ ಲಂಚ ಕೇಳಿದಲ್ಲಿ ದೂರು ಸ್ವೀಕರಿಸಲಾಗುವುದು ಎಂದು ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.