Wednesday, November 27, 2024
Wednesday, November 27, 2024

ಮಾ. 29- ಉಡುಪಿಯಲ್ಲಿ ಉದ್ಯೋಗ ಮೇಳ

ಮಾ. 29- ಉಡುಪಿಯಲ್ಲಿ ಉದ್ಯೋಗ ಮೇಳ

Date:

ಉಡುಪಿ: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯ ಮಿಷನ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಉಡುಪಿ, ಚೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರೀಸ್, ಸಣ್ಣ ಕೈಗಾರಿಕಾ ಸಂಘ, ಉಡುಪಿ ಐ.ಎಮ್.ಸಿ, ಕೈಗಾರಿಕಾ ತರಬೇತಿ ಸಂಸ್ಥೆ, ಡಾ. ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಉಡುಪಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಸಹಯೋಗದೊಂದಿಗೆ ಉದ್ಯೋಗ ಮೇಳ ಕಾರ್ಯಕ್ರಮವು ಮಾರ್ಚ್ 29 ರಂದು ಬೆಳಗ್ಗೆ 10 ಗಂಟೆಗೆ ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಉದ್ಘಾಟಿಸಲಿದ್ದು, ಕಾಲೇಜಿನ ಪ್ರಾಂಶುಪಾಲ ಡಾ. ಭಾಸ್ಕರ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.

ಉದ್ಯೋಗ ಮೇಳದಲ್ಲಿ ವಿವಿಧ ಕಂಪೆನಿ ಹಾಗೂ ಸಂಸ್ಥೆಗಳು ಭಾಗವಹಿಸಿ ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ಉದ್ಯೋಗಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದು, ಖಾಸಗಿ ವಲಯದಲ್ಲಿನ ಉದ್ಯೋಗಕ್ಕೆ ಆಸಕ್ತರಿರುವ ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಪದವಿ, ಡಿಪ್ಲೋಮಾ, ಐ.ಟಿ.ಐ, ಸ್ನಾತ್ತಕೋತ್ತರ ಹಾಗೂ ವಿವಿಧ ವಲಯಕ್ಕೆ ಸಂಬಂಧಿಸಿದ ವಿದ್ಯಾರ್ಹತೆಯ ಅಭ್ಯರ್ಥಿಗಳು ವಿದ್ಯಾರ್ಹತೆ ಅಂಕಪಟ್ಟಿ, ಕನಿಷ್ಠ ಮೂರು ರೆಸ್ಯೂಮ್ (ಬಯೋಡೇಟಾ) ಹಾಗೂ ಆಧಾರ್ ಕಾರ್ಡ್ ಪ್ರತಿ ಇತ್ಯಾದಿ ದಾಖಲೆಗಳೊಂದಿಗೆ ಕಾಲೇಜಿನಲ್ಲಿ ನಡೆಯುವ ಉದ್ಯೋಗ ಮೇಳದಲ್ಲಿ ಹಾಜರಾಗಬಹುದಾಗಿದೆ.

ಆನ್‌ಲೈನ್ ನೋಂದಣಿಗಾಗಿ http://udupi.nic.in ಹಾಗೂ ಹೆಚ್ಚಿನ ಮಾಹಿತಿಗಾಗಿ ಮೊ.ನಂ: 9739691294, 9449943882, 9901481729 ಮತ್ತು 9743278151 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಕೌಶಲ್ಯ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಕಲಚೇತನರ ಸಪ್ತಾಹ ಉದ್ಘಾಟನೆ

ಉಡುಪಿ, ನ.26: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ...

ನಗರದ ಸ್ವಚ್ಛತೆಗೆ ಪೌರಕಾರ್ಮಿಕರ ಕೊಡುಗೆ ಅಮೂಲ್ಯ: ಶಾಸಕ ಯಶ್‌ಪಾಲ್ ಎ ಸುವರ್ಣ

ಉಡುಪಿ, ನ.26: ಸ್ವಚ್ಛತೆಯಲ್ಲಿ ಉಡುಪಿಯು ರಾಷ್ಟ್ರಮಟ್ಟದಲ್ಲಿ ಗುರುತಿಸಲು ಕಾರಣ ಜಿಲ್ಲೆಯ ಪೌರಕಾರ್ಮಿಕರು....

ರಥಬೀದಿ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಮಂಗಳೂರು, ನ.26: ಡಾ. ಪಿ. ದಯಾನಂದ ಪೈ-ಪಿ.ಸತೀಶ್ ಪೈ. ಸರ್ಕಾರಿ ಪ್ರಥಮ...

ಆಳ್ವಾಸ್ ಕಾಲೇಜಿನಲ್ಲಿ ಸಿನಿಮಾ ರಸಗ್ರಹಣ ಕಾರ್ಯಾಗಾರ

ವಿದ್ಯಾಗಿರಿ, ನ.26: ಗಾಳಿ, ನೀರು, ಅಗ್ನಿಯಷ್ಟೇ ‘ದೃಶ್ಯ-ಶ್ರವ್ಯ ಮಾಧ್ಯಮ’ವೂ ಬದುಕಿನ ಅವಿಭಾಜ್ಯ...
error: Content is protected !!