Monday, November 25, 2024
Monday, November 25, 2024

ನಿವೃತ್ತ ಪೊಲೀಸರ ಆರೋಗ್ಯ ಯೋಜನೆ ಸಮರ್ಪಕವಾಗಿ ಜಾರಿಯಾಗಲಿ

ನಿವೃತ್ತ ಪೊಲೀಸರ ಆರೋಗ್ಯ ಯೋಜನೆ ಸಮರ್ಪಕವಾಗಿ ಜಾರಿಯಾಗಲಿ

Date:

ಉಡುಪಿ: ನಿವೃತ್ತ ಪೊಲೀಸರಿಗೆ ಸರಕಾರ ಜಾರಿಗೊಳಿಸಿರುವ ಆರೋಗ್ಯ ಭಾಗ್ಯ ಯೋಜನೆಯು ಇನ್ನಷ್ಟು ಪರಿಣಾಮಕಾರಿಯಾಗಿ, ಸಮರ್ಪಕವಾಗಿ ಜಾರಿಗೊಳ್ಳುವಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಿ.ಎಸ್.ಪಿ ನಿವೃತ್ತ ಸಹಾಯಕ ಪೊಲೀಸ್ ಉಪನಿರೀಕ್ಷಕ ಮ್ಯಾಥ್ಯೂ ಅರ್ಚಿಬಾಲ್ ಡಿ’ಸೋಜ ಹೇಳಿದರು.

ಅವರು ಶನಿವಾರ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ದಿನಾಚರಣೆ ಅಂಗವಾಗಿ, ಉಡುಪಿಯ ಪೊಲೀಸ್ ಕವಾಯತು ಮೈದಾನ (ಚಂದು ಮೈದಾನ) ದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು.

ನಿವೃತ್ತ ಪೊಲೀಸರಿಗೆ ಒದಗಿಸಿರುವ ಆರೋಗ್ಯ ಭಾಗ್ಯ ಯೋಜನೆಯನ್ನು ನಿರ್ದಿಷ್ಟ ಕೆಲವು ಆಸ್ಪತ್ರೆಗಳಲ್ಲಿ ಮಾತ್ರ ಜಾರಿಗೊಳಿಸಿದ್ದು, ಚಿಕಿತ್ಸೆ ನೀಡುವ ಅಸ್ಪತ್ರೆಗಳ ಸಂಖ್ಯೆಯನ್ನು ವಿಸ್ತರಿಸಬೇಕು ಅಲ್ಲದೇ ಚಿಕಿತ್ಸಾ ವೆಚ್ಚವನ್ನು 1 ಲಕ್ಷ ರೂಗಳಿಗೆ ಮಾತ್ರ ಸೀಮಿತಗೊಳಿಸಿದ್ದು, ಇದನ್ನು ಹೆಚ್ಚುಗೊಳಿಸಬೇಕು. ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಯಾವುದೇ ದುಶ್ಚಟಗಳಿಗೆ ಒಳಗಾಗದೇ ಉತ್ತಮ ಆರೋಗ್ಯವನ್ನು ಕಾಪಾಡಿಕೊಂಡು ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಪೊಲೀಸ್ ಧ್ವಜ ಬಿಡುಗಡೆ ಮತ್ತು ನಿವೃತ್ತ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಕ್ಷೇಮ ನಿಧಿಯ ಚೆಕ್ ಗಳನ್ನು ವಿತರಿಸಲಾಯಿತು.

ಆಕರ್ಷಕ ಪಥ ಸಂಚಲನ ನಡೆಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಸ್ವಾಗತಿಸಿ, ಎಎಸ್ಪಿ ಸಿದ್ದಲಿಂಗಪ್ಪ ವಂದಿಸಿದರು. ಉಡುಪಿ ಸೆನ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಂಜುನಾಥ್ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!