ಉಡುಪಿ: ಉಡುಪಿಯ ಸಗ್ರಿ ಶ್ರೀ ವಾಸುಕಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಎಪ್ರಿಲ್ 8 ರಿಂದ 11 ರವರೆಗೆ ನವನಿರ್ಮಿತ ಶಿಲಾಮಯ ನಾಗದೇವರ ಗುಡಿ ಸಮರ್ಪಣೆ, ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ನಾಗಮಂಡಲೋತ್ಸವ ನಡೆಯಲಿದೆ ಎಂದು ಉತ್ಸವ ಸಮಿತಿ ಅಧ್ಯಕ್ಷರು, ಶಾಸಕರಾದ ಕೆ. ರಘುಪತಿ ಭಟ್ ಅವರು ಸಗ್ರಿ ವಾಸುಕಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಉತ್ಸವದ ವಿವರಗಳ ಮಾಹಿತಿ ನೀಡಿದರು.
ನಾಗಮಂಡಲೋತ್ಸವದಲ್ಲಿ ಮುಖ್ಯಮಂತ್ರಿಗಳಾದ ಬಸವರಾಜ ಎಸ್. ಬೊಮ್ಮಾಯಿಯವರು ಪಾಲ್ಗೊಳ್ಳಲಿದ್ದು, ಎಪ್ರಿಲ್ 9 ರಂದು ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಆಗಮಿಸಲಿದ್ದಾರೆ ಎಂದು ಶಾಸಕ ಕೆ. ರಘುಪತಿ ಭಟ್ ಅವರು ತಿಳಿಸಿದರು.
ನಾಗಪಾತ್ರಿಗಳು, ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರರಾದ ಸಗ್ರಿ ಗೋಪಾಲಕೃಷ್ಣ ಸಾಮಗ, ವಿದ್ವಾನ್ ಗೋಪಾಲ ಜೋಯಿಸ್, ಸುಬ್ರಹ್ಮಣ್ಯ ಭಟ್, ಅನಂತ ಸಾಮಗ, ಗೀತಾ ಶೇಟ್, ವಾಸುದೇವ ಭಟ್ ಪೆರಂಪಳ್ಳಿ, ಪ್ರದೀಪ್ ರಾವ್ ಉಪಸ್ಥಿತರಿದ್ದರು.