ಉಡುಪಿ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ.) ಕರ್ನಾಟಕ, ನೇತ್ರಾವತಿ ವಲಯ, ಉಡುಪಿ ಜಿಲ್ಲೆ ಇದರ ವತಿಯಿಂದ ಬಿಲ್ಲವ ಸೇವಾ ಸಂಘ (ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ಆರೋಗ್ಯ ರಕ್ಷಣೆ ಹಾಗೂ ಸ್ವಸ್ಥ ಸಮಾಜ ನಿರ್ಮಾಣಕ್ಕಾಗಿ ಎಪ್ರಿಲ್ 11ರಿಂದ ಬೆಳಿಗ್ಗೆ 5.00ರಿಂದ 6.30ರ ವರೆಗೆ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿಗಳು ನಡೆಯಲಿವೆ.
ಎಪ್ರಿಲ್ 10 ರವಿವಾರ ಬೆಳಿಗ್ಗೆ 10.00ಕ್ಕೆ ಉಚಿತ ಯೋಗ ಶಿಕ್ಷಣ ತರಗತಿ ಶಿಬಿರದ ಉದ್ಘಾಟನೆ ನಡೆಯಲಿದೆ. ಅಂಬಲಪಾಡಿ ಗ್ರಾಮ ಮತ್ತು ಪರಿಸರದ 10 ವರ್ಷ ಮೇಲ್ಪಟ್ಟ ಎಲ್ಲಾ ವಯೋಮಾನದ ಪುರುಷರು ಹಾಗೂ ಮಹಿಳೆಯರು ಈ ಯೋಗ ಶಿಕ್ಷಣದ ಸದುಪಯೋಗವನ್ನು ಪಡೆದುಕೊಳ್ಳಬಹುದು ಎಂದು ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಜಿಲ್ಲಾ ಸಂಚಾಲಕಿ ಭವಾನಿ ಭಟ್ ಹಾಗೂ ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.