ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಚಿವ ಕೆ.ಎಸ್. ಈಶ್ವರಪ್ಪ, ಡೆತ್ ನೋಟ್ ಸುಳ್ಳು ಪ್ರಚಾರವಾಗಿದೆ. ನನ್ನ ವಿರುದ್ಧ ಮಾಡಿರುವ ಆರೋಪ ಸುಳ್ಳು ಪ್ರಚಾರದ ಭಾಗವಾಗಿದೆ.
ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಬೊಮ್ಮಾಯಿ ಹಾಗೂ ಪಕ್ಷದ ಅಧ್ಯಕ್ಷರಿಗೆ ತಿಳಿಸಿದ್ದೇನೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.