Saturday, November 23, 2024
Saturday, November 23, 2024

ಜನರ ಮನೆ ಬಾಗಿಲಿಗೆ ತೆರಳಿ ಸಮಸ್ಯೆಗಳ ಇತ್ಯರ್ಥ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಜನರ ಮನೆ ಬಾಗಿಲಿಗೆ ತೆರಳಿ ಸಮಸ್ಯೆಗಳ ಇತ್ಯರ್ಥ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

Date:

ಉಡುಪಿ: ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಮೂಲಕ ಜಿಲ್ಲೆಯ ಗ್ರಾಮೀಣ ಭಾಗದ ಜನರ ಮನೆ ಬಾಗಿಲಿಗೆ ತೆರಳಿ, ಅವರ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ತಕ್ಷಣದಲ್ಲಿ ಸ್ಪಂದಿಸಿ, ಪರಿಹಾರ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಕುಂದಾಪುರ ತಾಲೂಕಿನ ಹಾಲಾಡಿ ಗ್ರಾಮದಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸರ್ಕಾರದ ನಿರ್ದೇಶನದಂತೆ ಪ್ರತೀ ತಿಂಗಳ 3 ನೇ ಶನಿವಾರ ಜಿಲ್ಲೆಯ ಗ್ರಾಮೀಣ ಪ್ರದೇಶಗಳಿಗೆ, ಎಲ್ಲಾ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಸಾರ್ವಜನಿಕರ ಸಮಸ್ಯೆಗಳನ್ನು ಅಲಿಸಿ, ಅವುಗಳಿಗೆ ಸಂಬಂಧಪಟ್ಟ ಇಲಾಖೆಗಳ ಮೂಲಕ ಪರಿಹಾರ ಒದಗಿಸಲಾಗುತ್ತಿದ್ದು, ಸಾರ್ವಜನಿಕರೂ ಹಲವು ವರ್ಷಗಳಿಂದ ಬಾಕಿ ಇರುವ ತಮ್ಮ ಸಮಸ್ಯೆಗಳನ್ನು ಗಮನಕ್ಕೆ ತಂದು ಸೂಕ್ತ ಪರಿಹಾರ ಪಡೆಯುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಚ್ಚಟ್ಟು ಗ್ರಾಮದಲ್ಲಿ ಈ ಹಿಂದೆ ಎರಡು ಸರ್ಕಾರಿ ಬಸ್‌ಗಳನ್ನು ಓಡಿಸುತ್ತಿದ್ದು, ಹಲವು ದಿನಗಳಿಂದ ಈ ಸೇವೆ ಬಂದ್ ಆಗಿದ್ದು, ಇದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದ್ದು, ಕೂಡಲೇ ಈ ಹಿಂದಿನಂತೆ ಬಸ್‌ಗಳನ್ನು ಓಡಿಸುವಂತೆ ಸಾರ್ವಜನಿಕರು ಮನವಿ ಸಲ್ಲಿಸಿದರು. ಈ ಬಗ್ಗೆ ಕೂಡಲೇ ಪರಿಶೀಲಿಸಿ, ಸಾರ್ವಜನಿಕರಿಗೆ ಸರ್ಕಾರಿ ಬಸ್ ಸೇವೆ ಒದಗಿಸುವಂತೆ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ತೊಂಬಟ್ಟು ಎಂಬಲ್ಲಿ ರಸ್ತೆ ಕಾಮಗಾರಿ ಅಪೂರ್ಣವಾಗಿದ್ದು, ಕೂಡಲೇ ಇದನ್ನು ಪೂರ್ಣಗೊಳಿಸುವಂತೆ ಸಾರ್ವಜನಿಕರು ಕೋರಿದರು. ಸಂಬಂಧಪಟ್ಟ ರಸ್ತೆ ನಿರ್ಮಾಣ ಮಾಡುತ್ತಿರುವ ಅನುಷ್ಠಾನ ಇಲಾಖೆಯ ಅಧಿಕಾರಿಗಳು ತಕ್ಷಣವೇ ಆ ಸ್ಥಳಕ್ಕೆ ತೆರಳಿ, ಅಲ್ಲಿನ ಸ್ಥಿತಿಗತಿ ಬಗ್ಗೆ ವರದಿ ನೀಡುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ಹಲವು ವರ್ಷಗಳಿಂದ ಕೋಟೇಶ್ವರದಲ್ಲಿ ವಾಸವಿದ್ದು, ತಮಗೆ ಚುನಾವಣಾ ಗುರುತು ಚೀಟಿ, ಆಧಾರ್ ಕಾರ್ಡ್ ಮತ್ತು ನಿವೇಶನ ಒದಗಿಸುವಂತೆ ಲಿಂಗತ್ವ ಅಲ್ಪಸಂಖ್ಯಾತರು ಮನವಿ ಸಲ್ಲಿಸಿದರು.

ಆರ್.ಟಿ.ಸಿ ಯಲ್ಲಿನ ಬದಲಾವಣೆ ಸೇರಿದಂತೆ 30 ಕ್ಕೂ ಅಧಿಕ ಅರ್ಜಿಗಳ ಕುರಿತು ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು, ಸಮಸ್ಯೆಗಳಿಗೆ ವಿಳಂಬಕ್ಕೆ ಅವಕಾಶ ನೀಡದೇ ತ್ವರಿತಗತಿಯಲ್ಲಿ ಬಗೆಹರಿಸುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಾರ್ಯಕ್ರಮದಲ್ಲಿ 94 ಸಿ ಹಕ್ಕು ಪತ್ರ ವಿತರಣೆ, ಅಂಗವಿಕಲರ ಪೋಷಣಾ ಭತ್ಯೆ, ಎಂಡೋಸಲ್ಫಾನ್ ಪೀಡಿತರಿಗೆ ನೆರವು, ಅಕ್ರಮ-ಸಕ್ರಮ ಸಾಗುವಳಿ ಚೀಟಿ, ಇಂದಿರಾ ಗಾಂಧೀ ರಾಷ್ಟ್ರ‍ೀಯ ವೃದ್ಧಾಪ್ಯ ವೇತನ, ವಿಧವಾ ವೇತನ, ಸಂಧ್ಯಾ ಸುರಕ್ಷೆ ಸೇರಿದಂತೆ ವಿವಿಧ ಸವಲತ್ತುಗಳನ್ನು ವಿತರಿಸಲಾಯಿತು.

ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ವತಿಯಿಂದ, ಆಜಾದಿ ಕಾ ಅಮೃತ್ ಮಹೋತ್ಸವ್ ಅಂಗವಾಗಿ, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಫಲಾನುಭವಿಗಳಿಗೆ ಉಚಿತವಾಗಿ ಅಕ್ಕಿ ವಿತರಿಸಲಾಯಿತು. ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕುಮಾರ್ ಕೊಡ್ಗಿ, ಹಾಲಾಡಿ ಗ್ರಾ.ಪಂ.ಅಧ್ಯಕ್ಷೆ ಸಾಧು, ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ ಹಾಗೂ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಕುಂದಾಪುರ ಉಪ ವಿಭಾಗಾಧಿಕಾರಿ ರಾಜು ಪ್ರಾಸ್ತಾವಿಕವಾಗಿ ಮಾತನಾಡಿದರು. ತಹಶೀಲ್ದಾರ್ ಕಿರಣ್ ಗೌರಯ್ಯ ಸ್ವಾಗತಿಸಿ, ಕಂದಾಯ ನಿರೀಕ್ಷಕ ರಾಘವೇಂದ್ರ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲೆಯಲ್ಲಿ ಕೆ.ಎಫ್.ಡಿ ಪ್ರಕರಣಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ

ಉಡುಪಿ, ನ.22: ಕ್ಯಾಸನೂರು ಅರಣ್ಯ ರೋಗವು ಅಥವಾ ಮಂಗನ ಜ್ವರ ಕಾಯಿಲೆಯು...

ಇತಿಹಾಸದ ಅವಲೋಕನ ಬದುಕಿನ ಪುನರ್ ವಿಮರ್ಶೆಗೆ ಸಹಾಯಕ: ಶಬಾನ್ ಅಂಜುಮ್

ಕೋಟ, ನ.22: ಇತಿಹಾಸದ ಪಿತಾಮಹ ಹೆರೋಡಟಸ್ ಸಂಸ್ಕೃತಿಗಳ ತಿಳಿಯಲು ಒಂದು ಉತ್ತಮ...

ಆನಂದತೀರ್ಥ: ವಾರ್ಷಿಕ ಕ್ರೀಡಾಕೂಟ

ಕಟಪಾಡಿ, ನ.22: ಪೇಜಾವರ ಮಠದ ಆಡಳಿತಕ್ಕೊಳಪಟ್ಟ ಪಾಜಕ ಆನಂದತೀರ್ಥ ಪ.ಪೂ ಕಾಲೇಜು...

ಸಾಂಸ್ಕೃತಿಕ ಸ್ಪರ್ಧೆ: ಮಣಿಪಾಲ ಜ್ಞಾನಸುಧಾದ ವಿದ್ಯಾರ್ಥಿಗಳ ಅಮೋಘ ಸಾಧನೆ

ಉಡುಪಿ, ನ.22: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಶಾಲಾ ಶಿಕ್ಷಣ...
error: Content is protected !!