ಕೋಟ: ಎಳೆಯ ವಯಸ್ಸಿನಲ್ಲಿಯೇ ಸೃಜನಶೀಲ ವ್ಯಕ್ತಿತ್ವ ಮೈಗೂಡಿಸಿಕೊಳ್ಳಬೇಕು. ಶಾಲಾ ಶಿಕ್ಷಣದ ಜೊತೆ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಭವ್ಯ ಭವಿಷ್ಯಕ್ಕೆ ಅಡಿಪಾಯ ಹಾಕಬೇಕು ಎಂದು ರಾಷ್ಟ್ರ ಪ್ರಶಸ್ತಿ ಶಿಕ್ಷಕ ಪ್ರಶಸ್ತಿ ವಿಜೇತ ಸುರೇಶ್ ಮರಕಾಲ ಹೇಳಿದರು.
ಅವರು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ ನಲ್ಲಿ ಡಾ. ಶಿವರಾಮ ಕಾರಂತ ಪ್ರತಿಷ್ಠಾನ (ರಿ.) ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್(ರಿ) ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್, ಗೀತಾನಂದ ಫೌಂಡೇಶನ್ ಮಣೂರು-ಪಡುಕೆರೆ ಆಶ್ರಯದಲ್ಲಿ ನಡೆಯುತ್ತಿರುವ ದಿ. ಕೆ.ಸಿ ಕುಂದರ್ ಸ್ಮರಣಾರ್ಥ ನರೇಂದ್ರ ಕುಮಾರ್ ಕೋಟ ಸಾರಥ್ಯದಲ್ಲಿ ಉಚಿತ ಬೇಸಿಗೆ ಶಿಬಿರ ಗಮನ- 2022 (ಮಕ್ಕಳ ಹಬ್ಬದ ದಿಮ್ಸಾಲ್) ಕಾರ್ಯಕ್ರಮ ಉದ್ಘಾಟಿಸಿ ಮಾತಾನಾಡುತ್ತಿದ್ದರು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಶಿವರಾಮ ಕಾರಂತರು ನಮಗೆ ನೀಡಿದ ಬದುಕಿನ ಸಂದೇಶ ಅಮೋಘವಾದದ್ದು, ಅದರಂತೆ ನಮ್ಮ ಬದುಕನ್ನು ರೂಪಿಸಿಕೊಳ್ಳುವುದು ನಮ್ಮ ಜವಬ್ದಾರಿ. ಕೋಟದ ಕಾರಂತ ಥೀಮ್ ಪಾರ್ಕ್ನಲ್ಲಿ ನಡೆಯುತ್ತಿರುವ ಬೇಸಿಗೆ ಶಿಬಿರ ಇತರೆ ಬೇಸಿಗೆ ಶಿಬಿರಗಳಿಗಿಂತ ಭಿನ್ನವಾದುದು. ಮಕ್ಕಳ ಸರ್ವತೋಮುಖ ವ್ಯಕ್ತಿತ್ವದ ವಿಕಸನಕ್ಕೆ ಬೇಕಾದಂತಹ ಪೂರಕ ವಾತಾವರಣವನ್ನು ನಿರ್ಮಿಸಿ ಕೊಡುತ್ತಾ, ಮಕ್ಕಳಲ್ಲಿ ಸೃಜನಶೀಲತೆ ಬೆಳೆಯಲು ಮುಕ್ತ ಅವಕಾಶವನ್ನು ಒದಗಿಸಿ ಕೊಡುತ್ತಿದೆ ಎಂದರು.
ವೇದಿಕೆಯಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್, ಉಪಾಧ್ಯಕ್ಷ ವಾಸು ಪೂಜಾರಿ, ಕಾರಂತ ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ, ಟ್ರಸ್ಟಿ ಸತೀಶ್ ವಡ್ಡರ್ಸೆ, ಕುಮಾರ್ ಕಾಳವರ, ಶಿಬಿರ ತಂಡದ ನಾಯಕರು ಉಪಸ್ಥಿತರಿದ್ದರು.