ಕುಂದಾಪುರ: ಮಂಗಳೂರು ವಿ.ವಿಯ 2020-21ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಾದ ಕಾವ್ಯ ದೇವಾಡಿಗ ಬಿ.ಸಿ.ಎ. ಪದವಿಯಲ್ಲಿ ಪ್ರಥಮ ರ್ಯಾಂಕ್ ಹಾಗೂ ಸುಮಧುರ ಶೆಟ್ಟಿ ನಾಲ್ಕನೇ ರ್ಯಾಂಕ್ ಪಡೆದುಕೊಂಡಿರುತ್ತಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಬಿ.ಎಂ. ಸುಕುಮಾರ್ ಶೆಟ್ಟಿ ಹಾಗೂ ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರು ಹಾಗೂ ಬೋಧಕ ಬೋಧಕೇತರರು ಅಭಿನಂದನೆ ಸಲ್ಲಿಸಿದ್ದಾರೆ.