ಬೆಂಗಳೂರು: ನವದೆಹಲಿ, ಹರ್ಯಾಣ, ತಮಿಳುನಾಡಿನಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿವೆ. ರಾಜ್ಯದಲ್ಲಿಯೂ ದೈನಂದಿನ ಪ್ರಕರಣಗಳಲ್ಲಿ ಅಲ್ಪಮಟ್ಟದ ಏರಿಕೆ ಕಂಡುಬಂದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜ್ಯ ಸರಕಾರ ಇಂದು ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿ ಆದೇಶ ಹೊರಡಿಸಿದೆ.
ಮಾರ್ಗಸೂಚಿಗಳ ವಿವರ:
* ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ.
* ಕಛೇರಿ, ಬಸ್, ವಾಹನಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿದೆ.
* ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ನಿಷೇಧಿಸಲಾಗಿದ್ದು, ಉಗುಳುವುದು ಕಂಡುಬಂದಲ್ಲಿ ದಂಡ ವಿಧಿಸಲಾಗುವುದು.
* ಸಾರ್ವಜನಿಕ ಸ್ಥಳಗಳಲ್ಲಿ ಎರಡು ಅಡಿ ಅಂತರ ಕಾಯ್ದುಕೊಳ್ಳುವುದು.