Monday, September 23, 2024
Monday, September 23, 2024

ಡಾ. ರಾಜ್‌ಕುಮಾರ್ ಚಲನಚಿತ್ರಗಳ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಡಾ. ರಾಜ್‌ಕುಮಾರ್ ಚಲನಚಿತ್ರಗಳ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

Date:

ಉಡುಪಿ: ಕನ್ನಡ ಚಿತ್ರರಂಗದ ಮೇರು ನಟ ಡಾ. ರಾಜ್‌ಕುಮಾರ್ ಅವರು ಅತ್ಯುತ್ತಮ ಚಲನಚಿತ್ರಗಳನ್ನು ಮಾಡುವುದರ ಜೊತೆಗೆ ಸಮಾಜಕ್ಕೆ ಉತ್ತಮ ಸಂದೇಶಗಳನ್ನು ಸಹ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ತಿಳಿಸಿದರು.

ಅವರು ವಾರ್ತಾ ಭವನದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನಡೆದ ಡಾ. ರಾಜ್‌ಕುಮಾರ್ ಜನ್ಮ ದಿನಾಚರಣೆಯಲ್ಲಿ ಡಾ. ರಾಜ್‌ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.

ಡಾ. ರಾಜ್‌ಕುಮಾರ್ ಅವರು ಅನೇಕ ಚಿತ್ರಗಳನ್ನು ನಾನೂ ನೋಡಿದ್ದೇನೆ. ಸಹಜ ನಟನೆಯ ಮೂಲಕ ಜನರಿಗೆ ತೀರ ಹತ್ತಿರವಾಗಿದ್ದರು. ಅವರು ಜನಮಾನಸದ ನ್ಯಾಚುರಲ್ ಸೂಪರ್ ಸ್ಟಾರ್ ಆಗಿದ್ದಾರೆ ಡಾ. ರಾಜ್‌ಕುಮಾರ್ ಅವರದ್ದು ಆದರ್ಶಮಯ ಬದುಕು ಎಂದರು.

ಡಾ. ರಾಜ್‌ಕುಮಾರ್ ಅವರ ಒಂದೊಂದು ಚಲನಚಿತ್ರಗಳೂ ಮಾನವತಾ ಸಂದೇಶಗಳನ್ನು ನೀಡುವುದರೊಂದಿಗೆ ಸಮಾಜದ ಸ್ವಾಸ್ಥ್ಯಯವನ್ನು ಕಾಪಾಡಿವೆ. ಇವು ಅವರ ಜನಪ್ರಿಯತೆಗೆ ಸಾಕ್ಷಿಯಾಗಿ, ಈಗಲೂ ಸಹ ಜನ ಮಾನಸದಲ್ಲಿದ್ದಾರೆ ಎಂದರು.

ಅಪರ ಜಿಲ್ಲಾಧಿಕಾರಿ ವೀಣಾ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ರಾಜೇಶ್ ಶೆಟ್ಟಿ ಮೊದಲಾದವರು ಇದ್ದರು. 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...

ಮ್ಯಾಕ್ಸಿಕ್ಯಾಬ್ ನ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಕಡ್ಡಾಯ ನಿಯಮ ಸಡಿಲಿಕೆಗೆ ಮನವಿ

ಬೆಂಗಳೂರು, ಸೆ.22: ಉಡುಪಿ ಜಿಲ್ಲಾ ಟ್ಯಾಕ್ಸಿ ಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್...

ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ: ಭಾಸ್ಕರ್ ಸ್ವಾಮಿ

ಕೋಟ, ಸೆ.22: ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ. ಈ ನಿಟ್ಟಿನಲ್ಲಿ ಪಂಚವರ್ಣದ...

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು...
error: Content is protected !!