Saturday, September 21, 2024
Saturday, September 21, 2024

ಅಪಘಾತಪಡಿಸಿ ಸಾವಿಗೆ ಕಾರಣವಾದ ಆರೋಪಿಗೆ ಶಿಕ್ಷೆ

ಅಪಘಾತಪಡಿಸಿ ಸಾವಿಗೆ ಕಾರಣವಾದ ಆರೋಪಿಗೆ ಶಿಕ್ಷೆ

Date:

ಉಡುಪಿ: ಅತಿವೇಗ, ನಿರ್ಲಕ್ಷತನ ಹಾಗೂ ಅಜಾಗರೂಕತೆಯಿಂದ ಬೈಕನ್ನು ಚಲಾಯಿಸಿ, ಹಿಂಬದಿ ಕುಳಿತಿದ್ದ ಮಹಿಳೆಯ ಸಾವಿಗೆ ಕಾರಣವಾದ ಆರೋಪಿಗೆ ನಗರದ ಒಂದನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.

2017 ಅಕ್ಟೋಬರ್ 21 ರಂದು ಸಂಜೆ 5.15 ರ ಸುಮಾರಿಗೆ ಪ್ರತಾಪ ಸುದರ್ಶನ ಶೆಟ್ಟಿ ಎಂಬಾತನು ಜಯಲಕ್ಷ್ಮೀ ಎಂಬ ಮಹಿಳೆಯನ್ನು ಬೈಕಿನ ಹಿಂಬದಿ ಕೂರಿಸಿಕೊಂಡು, ಅತಿವೇಗ, ನಿರ್ಲಕ್ಷತನ ಹಾಗೂ ಅಜಾಗರೂಕತೆಯಿಂದ ಬೈಕನ್ನು ಚಲಾಯಿಸುತ್ತಿದ್ದಾಗ, ಉಡುಪಿ ತಾಲೂಕು ಪುತ್ತೂರು ಗ್ರಾಮದ ರೊಬೋಸಾಫ್ಟ್ ಟೆಕ್ನಾಲಜೀಸ್ ಪ್ರೈ ಲಿ ಕಂಪನಿಯ ಎದುರು ಚಂದ್ರಾವತಿಯವರು ಚಲಾಯಿಸುತ್ತಿದ್ದ ಸ್ಕೂಟರ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಕೂಟರ್ ಸಮೇತ ರಸ್ತೆಗೆ ಬಿದ್ದಿದ್ದು, ತರುಚಿದ ಗಾಯವಾಗಿರುತ್ತದೆ.

ಬೈಕ್‌ನಲ್ಲಿ ಸಹ ಸವಾರಳಾಗಿದ್ದ ಜಯಲಕ್ಷ್ಮೀಯವರು ರಸ್ತೆಗೆ ಬಿದ್ದು, ತಲೆಗೆ ಮತ್ತು ದೇಹದ ಇತರ ಭಾಗಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದು, ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದಾಗ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ. ಆರೋಪಿಯು ಅಪಘಾತದ ನಂತರ ಬೈಕನ್ನು ನಿಲ್ಲಿಸದೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸದೇ ಸ್ಥಳದಿಂದ ಪರಾರಿಯಾಗಿರುವ ಹಿನ್ನೆಲೆ, ಉಡುಪಿ ಸಂಚಾರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆ ನಗರದ ಒಂದನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶ ಶ್ಯಾಮ ಪ್ರಕಾಶ್ ಅವರು ಆರೋಪಿ ಪ್ರತಾಪ ಸುದರ್ಶನ ಶೆಟ್ಟಿಗೆ 2 ವರ್ಷದ ಕಾರಾಗೃಹ ವಾಸ ಶಿಕ್ಷೆ ಹಾಗೂ 11500 ರೂ. ದಂಡ ವಿಧಿಸಿ, ತೀರ್ಪು ನೀಡಿರುತ್ತಾರೆ. ಸರಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕಿ ಮೋಹಿನಿ ಕೆ ವಾದ ಮಂಡಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!