Saturday, September 21, 2024
Saturday, September 21, 2024

ವಿಕಾಸ-2022 ಬೇಸಿಗೆ ಶಿಬಿರ ಉದ್ಘಾಟನೆ

ವಿಕಾಸ-2022 ಬೇಸಿಗೆ ಶಿಬಿರ ಉದ್ಘಾಟನೆ

Date:

ಮಲ್ಪೆ: ತೆಂಕನಿಡಿಯೂರಿನ ಬಾಲ ಸಂಸ್ಕಾರ ಕೇಂದ್ರ, ಶ್ರೀ ಕಾಳಿಕಾಂಬಾ ಭಜನಾ ಸಂಘ (ರಿ.) ಮತ್ತು ಶ್ರೀ ದೇವಿ ಮಹಿಳಾ ಮಂಡಳಿ ಜಂಟಿ ಆಶ್ರಯದಲ್ಲಿ ವಿಕಾಸ-2022 ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭ ನಡೆಯಿತು.

ಮಣಿಪಾಲ ಮಾಹೆಯ ಡಾ. ಪ್ರತಿಮಾ ಜಯಪ್ರಕಾಶ್ ಉದ್ಘಾಟನೆ ನೆರವೇರಿಸಿ ಮಾತನಾಡುತ್ತಾ, ಕೊರೊನಾ ವಿಪತ್ತಿನಿಂದ ತತ್ತರಿಸಿದ ನಂತರ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕಾಗಿ ಇಂತಹ ಬೇಸಿಗೆ ಶಿಬಿರಗಳು ಅತೀ ಅಗತ್ಯವಾಗಿವೆ.

ನಮ್ಮ ಆಲೋಚನೆ ಹಾಗೂ ಚಿಂತನೆಗಳು ನಮ್ಮ ಭವಿಷ್ಯವನ್ನು ರೂಪಿಸುತ್ತವೆ. ಹಾಗಾಗಿ ಧನಾತ್ಮಕ ಚಿಂತನೆಗಳನ್ನು ಮಾಡುತ್ತಿರಬೇಕು. ವಿದ್ಯಾರ್ಥಿ ಶಿಬಿರದ ಸದುಪಯೋಗವನ್ನು ಎಲ್ಲಾ ಶಿಬಿರಾರ್ಥಿಗಳು ಪಡೆದುಕೊಳ್ಳಬೇಕು ಎಂದು ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.

ಅಧ್ಯಕ್ಷತೆಯನ್ನು ಶ್ರೀ ಕಾಳಿಕಾಂಬಾ ಭಜನಾ ಸಂಘದ ಅಧ್ಯಕ್ಷ ಟಿ. ಕೃಷ್ಣ ಆಚಾರ್ಯ ವಹಿಸಿದ್ದರು. ವೇದಿಕೆಯಲ್ಲಿ ಶ್ರೀ ದೇವಿ ಮಹಿಳಾ ಮಂಡಳಿಯ ಅಧ್ಯಕ್ಷೆ ಸುಶೀಲಾ ವಾದಿರಾಜ ಆಚಾರ್ಯ ಹಾಗೂ ಬಾಲ ಸಂಸ್ಕಾರ ಕೇಂದ್ರದ ಅಧ್ಯಕ್ಷ ಪ್ರದೀಪ ಆಚಾರ್ಯ ಉಪಸ್ಥಿತರಿದ್ದರು.

ಸುಷ್ಮಾ ರಾಜೇಶ ಆಚಾರ್ಯ ಪ್ರಾರ್ಥನೆ ನಡೆಸಿಕೊಟ್ಟರು. ಪ್ರದೀಪ ಆಚಾರ್ಯ ಸ್ವಾಗತಿಸಿ, ಶಶಿಕಲಾ ಭಾಸ್ಕರ ಆಚಾರ್ಯ ವಂದಿಸಿದರು. ಉದಯ ಜೆ. ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

ಮೇ 8 ರವರೆಗೆ ನಡೆಯುವ ಬೇಸಿಗೆ ಶಿಬಿರದಲ್ಲಿ 50 ಶಿಬಿರಾರ್ಥಿಗಳಿದ್ದು, ಚಿತ್ರಕಲೆ, ರಂಗ ತರಬೇತಿ, ಹಾಡು, ನೃತ್ಯ, ಕೊಲಾಜ್, ಗ್ರೀಟಿಂಗ್ ತಯಾರಿ, ಕ್ರಾಫ್ಟ್, ಫೇಸ್ ಪೈಂಟ್, ಸ್ಪರ್ಧಾತ್ಮಕ ಪರೀಕ್ಷೆಗಳು, ರಸಪ್ರಶ್ನೆ, ಮಾನವ ಸಂಪನ್ಮೂಲ ತರಬೇತಿ ಇತ್ಯಾದಿ ವಿಷಯಗಳ ಬಗ್ಗೆ ತರಬೇತಿ ನೀಡಲಾಗುತ್ತಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!