ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಜೆಡಿಎಸ್‌ನ ಹಿರಿಯ ನಾಯಕ, ಏಳು ಬಾರಿ ಶಾಸಕರಾಗಿರುವ ಬಸವರಾಜ ಹೊರಟ್ಟಿಯವರು ಮಂಗಳವಾರ ಜೆಡಿಎಸ್ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಬಸವರಾಜ ಹೊರಟ್ಟಿ ಭಾರತೀಯ ಜನತಾ ಪಕ್ಷ ಸೇರಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಗೃಹ ಸಚಿವ ಅರಗ ಜ್ಞಾನೇಂದ್ರ, ಸಚಿವರುಗಳಾದ ಆರ್ ಅಶೋಕ್, ಕೋಟ ಶ್ರೀನಿವಾಸ್ ಪೂಜಾರಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಮತ್ತಿತರರು ಉಪಸ್ಥಿತರಿದ್ದರು.