ಬೆಂಗಳೂರು: ರಾಜ್ಯದಲ್ಲಿ ಕೋವಿಡ್19 ದೈನಂದಿನ ಪಾಸಿಟಿವ್ ಪ್ರಕರಣಗಳಲ್ಲಿ ಮತ್ತೊಮ್ಮೆ ಹೆಚ್ಚಳವಾಗಿದೆ. ರಾಜ್ಯದಲ್ಲಿಂದು 191 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 138 ಮಂದಿ ಗುಣಮುಖರಾಗಿದ್ದಾರೆ. ಬೆಂಗಳೂರು ನಗರದಲ್ಲಿ ಅತ್ಯಧಿಕ 171 ಪ್ರಕರಣಗಳು ಪತ್ತೆಯಾಗಿದೆ.
ರಾಜ್ಯದಲ್ಲಿಂದು ಯಾವುದೇ ಸಾವು ಸಂಭವಿಸಿಲ್ಲ. 1854 ಸಕ್ರಿಯ ಪ್ರಕರಣಗಳಿವೆ.