ಉಡುಪಿ: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಅಡಿಯಲ್ಲಿ ಸೌಲಭ್ಯ ಪಡೆಯಲು ಜೂನ್ 1 ರಿಂದ ಬಿ.ಪಿ.ಎಲ್ ಮತ್ತು ಎ.ಪಿ.ಎಲ್ ಕಾರ್ಡ್ ಫಲಾನುಭವಿಗಳು AB-Ark Card ಅಥವಾ ಆಯುಷ್ಮಾನ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕು.
ಸಾರ್ವಜನಿಕರು ತಮ್ಮ ಕುಟುಂಬದ ಪ್ರತಿಯೊಬ್ಬ ಸದಸ್ಯರೊಂದಿಗೆ ರೇಷನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ನೊಂದಿಗೆ ನಾಗರಿಕ ಸೇವಾ ಕೇಂದ್ರಗಳಾದ ಉಡುಪಿ ಜಿಲ್ಲಾ ಆಸ್ಪತ್ರೆ, ಕುಂದಾಪುರ ಮತ್ತು ಕಾರ್ಕಳ ತಾಲೂಕು ಆಸ್ಪತ್ರೆ, ಸಮುದಾಯ ಅರೋಗ್ಯ ಕೇಂದ್ರ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ಸೇವಾ ಸಿಂಧು, ಗ್ರಾಮ –ಒನ್, ಕರ್ನಾಟಕ –ಒನ್, ಬಾಪೂಜಿ ಸೇವಾ ಕೇಂದ್ರ ಅಥವಾ ಐಟಿಐ ಇ-ಸೇವಾ ಕೇಂದ್ರಗಳಲ್ಲಿ ಅಯುಷ್ಮಾನ್ ಕಾರ್ಡ್ ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.