Monday, November 25, 2024
Monday, November 25, 2024

ವ್ಯಕ್ತಿ ಅಲ್ಲ, ಪಕ್ಷ ಮುಖ್ಯ: ರಮೇಶ್ ಕಾಂಚನ್

ವ್ಯಕ್ತಿ ಅಲ್ಲ, ಪಕ್ಷ ಮುಖ್ಯ: ರಮೇಶ್ ಕಾಂಚನ್

Date:

ಉಡುಪಿ: ಚುನಾವಣಾ ವರ್ಷದಲ್ಲಿ ಪಕ್ಷಾಂತರ ನಡೆಯುವುದು ಸಾಮಾನ್ಯ. ಹಾಗಿರುವಾಗ, ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡದ್ದೂ ರಾಜಕೀಯದ ಭಾಗವೇ ಆಗಿದೆ. ಕಾಂಗ್ರೆಸ್ ಪಕ್ಷ ಹಿಂದೆಯೂ ಅನೇಕ ಬಾರಿ ಇಂತಹ ಸಂದರ್ಭಗಳನ್ನು ಸಮರ್ಥವಾಗಿ ಎದುರಿಸಿದೆ.

ಪಕ್ಷದ ಮೇಲಿನ ಪ್ರೀತಿ ಹಾಗೂ ಜಾತ್ಯಾತೀತ ಸಿದ್ಧಾಂತದ ಮೇಲಿನ ನಂಬಿಕೆಯಿರುವ ಲಕ್ಷಾಂತರ ಕಾರ್ಯಕರ್ತರು ಪಕ್ಷದಲ್ಲಿರುವಾಗ ಪಕ್ಷವನ್ನು ಸಂಘಟಿಸಿ, ಅಧಿಕಾರದತ್ತ ಕೊಂಡೊಯ್ಯುವುದು ಕಷ್ಟವಾಗದು ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ನಗರಸಭಾ ವಿರೋಧ ಪಕ್ಷದ ನಾಯಕ ರಮೇಶ್ ಕಾಂಚನ್ ಹೇಳಿದ್ದಾರೆ.

ಪಕ್ಷದಲ್ಲಿ ಕಾರ್ಯಕರ್ತರು ಹಾಗೂ ನಾಯಕರಿಗೆ ಕೊರತೆ ಇಲ್ಲ. ಹಾಗಾಗಿ ಅಭ್ಯರ್ಥಿಯ ಕೊರತೆಯೂ ಕಾಡದು ಎಂಬ ವಿಶ್ವಾಸವಿದೆ. ಏನಿಲ್ಲದಿದ್ದರೂ ಕಾರ್ಯಕರ್ತರು ಸೂಚಿಸುವ ನಾಯಕನೇ ಅಭ್ಯರ್ಥಿಯಾಗಿ ವಿಜಯದ ಕಿರೀಟ ಧರಿಸಿದ ಇತಿಹಾಸವೂ ಕಾಂಗ್ರೆಸ್ ಪಕ್ಷದಲ್ಲಿದೆ. ಕಾಂಗ್ರೆಸ್‌ನಲ್ಲಿ ಹಲವಾರು ಮಂದಿ ಅನುಭವೀ ಹಾಗೂ ಉತ್ಸಾಹೀ ಕಾರ್ಯಕರ್ತರಿದ್ದಾರೆ. ಕಾರ್ಯಕರ್ತರ ಬೆನ್ನಿಗೆ ನಿಲ್ಲುವ ನಾಯಕರುಗಳೂ ಅನೇಕರಿದ್ದಾರೆ. ಅವರೆಲ್ಲರ ಬೆಂಬಲದೊಂದಿಗೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರ ಹಿಡಿಯುವುದು ನಿಶ್ಚಿತವಾಗಿದೆ.

ರಾಜಕೀಯದಲ್ಲಿ ಪಕ್ಷ ಮುಖ್ಯವೇ ಹೊರತು ವ್ಯಕ್ತಿ ಅಲ್ಲ. ಹಾಗಾಗಿ ಪಕ್ಷದ ಕಾರ್ಯಕರ್ತರು ಎದೆಗುಂದದೆ, ಈ ಸಂದರ್ಭವನ್ನು ಸವಾಲಾಗಿ ಸ್ವೀಕರಿಸಿ, ಹುರುಪಿನಿಂದ ಪಕ್ಷವನ್ನು ಪುನರ್ ಸಂಘಟಿಸಿ ಮುಂಬರುವ ವಿಧಾನಸಭಾ ಚುನಾವಣೆಯ ವೇಳೆಗೆ, ಕರ್ನಾಟಕ ಕರಾವಳಿಯಲ್ಲಿ ಬದಲಾವಣೆಯ ಗಾಳಿ ಬೀಸಲು ಕಾರಣರಾಗೋಣ ಎಂಬುದಾಗಿ ಪಕ್ಷದ ಎಲ್ಲ ಅಭಿಮಾನಿಗಳಲ್ಲಿ ವಿನಂತಿ ಮಾಡುತ್ತೇನೆ ಎಂದು ರಮೇಶ್ ಕಾಂಚನ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...

ತುಳು ಭಾವಗೀತೆ ಸ್ಪರ್ಧೆ

ಉಡುಪಿ, ನ.24: ತುಳುಕೂಟ ಉಡುಪಿ (ರಿ,) ವತಿಯಿಂದ ದಿ. ನಿಟ್ಟೂರು ಸಂಜೀವ...

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...
error: Content is protected !!