ಉಡುಪಿ: ಆರ್ಗನೈಸೇಶನ್ ಫಾರ್ ರೂರಲ್ ಡೆವಲಪ್ಮೆಂಟ್ ಎಜುಕೇಶನ್ ಆ್ಯಂಡ್ ರಿಸರ್ಚ್ (ಆರ್ಡರ್) ವತಿಯಿಂದ 80 ಬಡಗಬೆಟ್ಟು ಗ್ರಾಮ ಪಂಚಾಯತ್ ಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಕ್ಕಳ ಅಂಕಿ ಅಂಶಗಳನ್ನು ಪ್ರಕಟಿಸುವ ಬೋರ್ಡ್ ನ್ನು ಉಚಿತವಾಗಿ ನೀಡಲಾಯಿತು.
ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಮಾಧವಿ ಎಸ್ ಆಚಾರಿ, ಉಪಾಧ್ಯಕ್ಷರಾದ ನಿರುಪಮಾ ಎಸ್ ಹೆಗ್ಡೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಶೋಕ್ ಕುಮಾರ್, ಕಾರ್ಯದರ್ಶಿ ಶಕುಂತಳಾ ಶೆಟ್ಟಿ, ಆರ್ಗನೈಸೇಶನ್ ಫಾರ್ ರೂರಲ್ ಡೆವಲಪ್ಮೆಂಟ್ ಎಜುಕೇಶನ್ ಆ್ಯಂಡ್ ರಿಸರ್ಚ್ ಸದಸ್ಯ, ಪಡಿ ಸಂಸ್ಥೆಯ ಉಡುಪಿ ಜಿಲ್ಲಾ ಸಂಯೋಜಕ ವಿವೇಕ್, ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರದ ಉಪಾಧ್ಯಕ್ಷರಾದ ತಿಲೋತ್ತಮ ನಾಯಕ್, ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮೈಸೂರು ಇದರ ರಾಜ್ಯ ಸಂಪನ್ಮೂಲ ವ್ಯಕ್ತಿ ಜಯವಂತ್ ರಾವ್, ಶಿಕ್ಷಣ ಸಂಪನ್ಮೂಲ ಕೇಂದ್ರ ಉಡುಪಿ ಜೊತೆ ಕಾರ್ಯದರ್ಶಿ ವಾಸು ಆಚಾರ್, ಗ್ರಾಮ ಪಂಚಾಯತ್ ಎಲ್ಲಾ ಸದಸ್ಯರು, ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.