ಉಡುಪಿ: ಗ್ರಾಮ ಪಂಚಾಯತ್‌ಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸ್ಥಾನಗಳಿಗೆ ಮೇ 20 ರಂದು ಮತದಾನ ನಡೆಯಲಿರುವ ಹಿನ್ನೆಲೆ, ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನರಹಿತ ವಿದ್ಯಾ ಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರೆ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಕೈಗಾರಿಕಾ ಸಂಸ್ಥೆಗಳು, ಸಹಕಾರಿ ರಂಗದ ಸಂಸ್ಥೆಗಳಲ್ಲಿ, ವ್ಯವಹಾರಿಕಾ ಸಂಸ್ಥೆಗಳಲ್ಲಿ, ಔದ್ಯಮಿಕ ಸಂಸ್ಥೆಗಳಲ್ಲಿ ಹಾಗೂ ಇತರೆ ಎಸ್ಟಾಬ್ಲಿಶ್‌ಮೆಂಟ್ ಗಳಲ್ಲಿ ಖಾಯಂ ಹಾಗೂ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಅರ್ಹ ಮತದಾರ ನೌಕರರಿಗೆ ಸೀಮಿತವಾದಂತೆ, ಮತದಾನ ಮಾಡಲು ಅನುಕೂಲವಾಗುವಂತೆ, ಪ್ರಜಾಪ್ರತಿನಿಧಿ ಕಾಯ್ದೆಯನ್ವಯ ಚುನಾವಣಾ ದಿನದಂದು ವೇತನ ಸಹಿತ ರಜೆ ಘೋಷಣೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಗ್ರಾಮ ಪಂಚಾಯತ್ ಉಪ ಚುನಾವಣೆ: ವೇತನ ಸಹಿತ ರಜೆ
ಗ್ರಾಮ ಪಂಚಾಯತ್ ಉಪ ಚುನಾವಣೆ: ವೇತನ ಸಹಿತ ರಜೆ
Date: