ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಯೋಗದೊಂದಿಗೆ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಜಿಲ್ಲೆಯ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯ ಸರ್ಕಾರಿ ಶಾಲೆ, ಕಾಲೇಜು, ವಸತಿ ನಿಲಯಗಳಲ್ಲಿ ಲಭ್ಯವಿರುವ ಸರ್ಕಾರಿ ಜಾಗಗಳಲ್ಲಿ, ಖೋ-ಖೋ, ಕಬಡ್ಡಿ, ವಾಲಿಬಾಲ್, ಬಾಸ್ಕೆಟ್‌ಬಾಲ್, ಹಾಕಿ, ಗರಡಿ ಮನೆ/ ಕುಸ್ತಿ ಅಖಾಡ ಮತ್ತು ಶಟ್ಲ್ ಬ್ಯಾಡ್ಮಿಂಟನ್ ಕ್ರೀಡಾ ಅಂಕಣಗಳನ್ನು ನಿರ್ಮಿಸಲು ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯಲ್ಲಿ ಒಟ್ಟು 274 ಕ್ರೀಡಾ ಅಂಕಣಗಳನ್ನು ನಿರ್ಮಿಸಬೇಕಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಅರ್ಹ ಸರ್ಕಾರಿ ಶಾಲಾ, ಕಾಲೇಜು ಹಾಗೂ ವಸತಿ ನಿಲಯಗಳು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.