ನವದೆಹಲಿ: ಗೃಹಬಳಕೆಯ ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯನ್ನು 3.50 ರೂಗಳಷ್ಟು ಹೆಚ್ಚಿಸಲಾಗಿದ್ದು, ವಾಣಿಜ್ಯ ಸಿಲಿಂಡರ್ ಬೆಲೆಯನ್ನು 8 ರೂ.ಗಳಷ್ಟು ಹೆಚ್ಚಿಸಲಾಗಿದೆ. ತನ್ಮೂಲಕ ತಿಂಗಳಲ್ಲಿ ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯಲ್ಲಿ ಎರಡನೇ ಬಾರಿಗೆ ಹೆಚ್ಚಳವಾಗಿದೆ. ಈ ಹೆಚ್ಚಳದ ನಂತರ, ದೇಶೀಯ ಸಿಲಿಂಡರ್ ಈಗ ದೇಶಾದ್ಯಂತ ಬಹುತೇಕ ಎಲ್ಲಾ ನಗರಗಳಲ್ಲಿ 1000 ರೂ.ಗಡಿ ದಾಟಿದೆ.
ದೆಹಲಿ ಮತ್ತು ಮುಂಬೈನಲ್ಲಿ ಗೃಹಬಳಕೆಯ ಎಲ್ ಪಿಜಿ ಸಿಲಿಂಡರ್ ಗಳ ಬೆಲೆ 1003 ರೂ., ಕೋಲ್ಕತಾದಲ್ಲಿ ಗೃಹ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ 1029 ರೂ., ಚೆನ್ನೈನಲ್ಲಿ ಇಂದಿನಿಂದ 1018.5 ರೂ. ಇದೆ. ಇದಕ್ಕೂ ಮೊದಲು ಮೇ 7 ರಂದು ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು 50 ರೂ.ಗಳಷ್ಟು ಹೆಚ್ಚಿಸಲಾಗಿತ್ತು.