Monday, September 23, 2024
Monday, September 23, 2024

ಜೂನ್ 1 ರಿಂದ ಜುಲೈ 31- ಯಾಂತ್ರೀಕೃತ ಮೀನುಗಾರಿಕೆ ನಿಷೇಧ

ಜೂನ್ 1 ರಿಂದ ಜುಲೈ 31- ಯಾಂತ್ರೀಕೃತ ಮೀನುಗಾರಿಕೆ ನಿಷೇಧ

Date:

ಉಡುಪಿ: ರಾಜ್ಯ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ ಅನ್ವಯ ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆ ಹಾಗೂ ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್ ಅಥವಾ ಔಟ್‌ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮೂಲಕ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರ ವರೆಗೆ ಒಟ್ಟು 61 ದಿನಗಳ ಕಾಲ ನಿಷೇಧಿಸಲಾಗಿರುತ್ತದೆ.

ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಕ ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿರುತ್ತದೆ.

ಈ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕಡಲ ಮೀನುಗಾರಿಕೆ ಕಾಯ್ದೆ 1986 ರ ಅನ್ವಯ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ, ಒಂದು ವರ್ಷದ ಅವಧಿಗೆ ಡೆಲಿವರಿ ಪಾಯಿಂಟ್‌ನಲ್ಲಿ ರಾಜ್ಯ ಮಾರಾಟಕರ ರಹಿತ ಡೀಸಿಲ್ ಪಡೆಯಲು ಅನರ್ಹರಾಗುತ್ತಾರೆ. ಆದ್ದರಿಂದ ಕರಾವಳಿ ಪ್ರದೇಶದ ಮೀನುಗಾರರು ಈ ಆದೇಶವನ್ನು ಪಾಲಿಸುವಂತೆ ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...

ಮ್ಯಾಕ್ಸಿಕ್ಯಾಬ್ ನ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಕಡ್ಡಾಯ ನಿಯಮ ಸಡಿಲಿಕೆಗೆ ಮನವಿ

ಬೆಂಗಳೂರು, ಸೆ.22: ಉಡುಪಿ ಜಿಲ್ಲಾ ಟ್ಯಾಕ್ಸಿ ಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್...

ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ: ಭಾಸ್ಕರ್ ಸ್ವಾಮಿ

ಕೋಟ, ಸೆ.22: ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ. ಈ ನಿಟ್ಟಿನಲ್ಲಿ ಪಂಚವರ್ಣದ...

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು...
error: Content is protected !!