ಉಡುಪಿ: ಕರ್ನಾಟಕ ಸಾಹಿತ್ಯ ಅಕಾಡೆಮಿಯ ವತಿಯಿಂದ 2021 ನೇ ಸಾಲಿನ ಪುಸ್ತಕ ಬಹುಮಾನಕ್ಕಾಗಿ 2021 ರ ಜನವರಿ 1 ರಿಂದ ಡಿಸೆಂಬರ್ 31 ರ ಒಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಕನ್ನಡ ಪುಸ್ತಕಗಳನ್ನು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ಕಾವ್ಯ, ನವಕವಿಗಳ ಪ್ರಥಮ ಕವನ ಸಂಕಲನ, ಕಾವ್ಯ ಹಸ್ತಪ್ರತಿ, ಕಾದಂಬರಿ, ಸಣ್ಣಕತೆ, ನಾಟಕ, ಲಲಿತ ಪ್ರಬಂಧ, ಪ್ರವಾಸ ಸಾಹಿತ್ಯ, ಜೀವನ ಚರಿತ್ರೆ/ ಆತ್ಮಕಥೆ, ಸಾಹಿತ್ಯ ವಿಮರ್ಶೆ, ಗ್ರಂಥ ಸಂಪಾದನೆ, ಮಕ್ಕಳ ಸಾಹಿತ್ಯ, ವಿಜ್ಞಾನ ಸಾಹಿತ್ಯ, ಮಾನವಿಕ, ಸಂಶೋಧನೆ, ವೈಚಾರಿಕ/ ಅಂಕಣ ಬರಹ, ಅನುವಾದ (ಕನ್ನಡದಿಂದ ಅನ್ಯಭಾಷೆಗಳಿಗೆ ಅನುವಾದಗೊಂಡ ಹಾಗೂ ಇಂಗ್ಲೀಷ್ ಸೇರಿದಂತೆ ಭಾರತೀಯ ಭಾಷೆಯಿಂದ ಕನ್ನಡಕ್ಕೆ ಅನುವಾದಗೊಂಡ ಕೃತಿಗಳು), ಲೇಖಕರ ಮೊದಲ ಸ್ವತಂತ್ರ ಕೃತಿ, ಕನ್ನಡದಿಂದ ಇಂಗ್ಲೀಷಿಗೆ ಅನುವಾದ, ದಾಸ ಸಾಹಿತ್ಯ ಮತ್ತು ಸಂಕೀರ್ಣದಂತಹ ಪ್ರಕಾರಗಳ ಕೃತಿಗಳನ್ನು ಬಹುಮಾನಕ್ಕಾಗಿ ಜೂನ್ 15 ರ ಒಳಗೆ ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, ಜೆ.ಸಿ ರಸ್ತೆ, ಬೆಂಗಳೂರು ಇವರಿಗೆ ಅಂಚೆ ಅಥವಾ ಕೊರಿಯರ್ ಮೂಲಕ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಅನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.