Friday, September 20, 2024
Friday, September 20, 2024

ಕರಾವಳಿ ನಿಯಂತ್ರಣ ವಲಯ ಪ್ರದೇಶದಲ್ಲಿ ಮರಳು ದಿಬ್ಬಗಳ ತೆರವು ಹಾಗೂ ಸಾಗಾಣಿಕೆ ನಿಷೇಧ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಕರಾವಳಿ ನಿಯಂತ್ರಣ ವಲಯ ಪ್ರದೇಶದಲ್ಲಿ ಮರಳು ದಿಬ್ಬಗಳ ತೆರವು ಹಾಗೂ ಸಾಗಾಣಿಕೆ ನಿಷೇಧ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

Date:

ಉಡುಪಿ: ಉಡುಪಿ ಜಿಲ್ಲಾ ಕರಾವಳಿ ನಿಯಂತ್ರಣ ವಲಯದ ನದಿ ಪಾತ್ರಗಳಲ್ಲಿನ ಮರಳು ದಿಬ್ಬ ತೆರವುಗೊಳಿಸುವ ಸಂಬಂಧ ಒಟ್ಟು 161 ತಾತ್ಕಾಲಿಕ ಮರಳು ಪರವಾನಿಗೆಯನ್ನು ವಿತರಿಸಲಾಗಿರುತ್ತದೆ. ಅವುಗಳಲ್ಲಿ ಕುಂದಾಪುರ ತಾಲ್ಲೂಕು ವ್ಯಾಪ್ತಿಯ 04 ಮರಳು ದಿಬ್ಬಗಳನ್ನು ತೆರವುಗೊಳಿಸಲು ವಿತರಿಸಲಾದ ಒಟ್ಟು 39 ತಾತ್ಕಾಲಿಕ ಮರಳು ಪರವಾನಿಗೆಗಳಿಗೆ ಸಂಬಂಧಿಸಿದಂತೆ KSCZMA ಯಿಂದ ನೀಡಲಾದ ನಿರಾಕ್ಷೇಪಣಾ ಪತ್ರದ ಅವಧಿಯು ದಿನಾಂಕ: 29.03.2022 ರಂದು ಮುಕ್ತಾಯಗೊಂಡಿದ್ದು, ಸದರಿ ಪರವಾನಿಗೆಗಳನ್ನು ಈಗಾಗಲೇ ತಡೆಹಿಡಿಯಲಾಗಿರುತ್ತದೆ ಹಾಗೂ ಸ್ಥಗಿತಗೊಳಿಸಲಾಗಿರುತ್ತದೆ.

ಉಡುಪಿ ಮತ್ತು ಬ್ರಹ್ಮಾವರ ತಾಲ್ಲೂಕು ವ್ಯಾಪ್ತಿಯ ಒಟ್ಟು 19 ಮರಳು ದಿಬ್ಬಗಳನ್ನು ತೆರವುಗೊಳಿಸುವ ಸಂಬಂಧ ವಿತರಿಸಲಾದ ಒಟ್ಟು 122 ತಾತ್ಕಾಲಿಕ ಮರಳು ಪರವಾನಿಗೆಗಳಿಗೆ ಸಂಬಂಧಿಸಿದಂತೆ KSCZMA ಯಿಂದ ನೀಡಲಾದ ನಿರಾಕ್ಷೇಪಣಾ ಪತ್ರದ ಅವಧಿಯು ದಿನಾಂಕ:22.08.2022 ರವರೆಗೆ ಇರುವುದಾಗ್ಯೂ ಪ್ರಸ್ತುತ ಮಾನ್ಯ ಹಸಿರು ಪೀಠ ನ್ಯಾಯಾಲಯ, ದಕ್ಷಿಣ ವಲಯ ಚೆನೈ ನ ಆದೇಶದನುಸಾರ ಉಡುಪಿ ಜಿಲ್ಲಾ 07 ಸದಸ್ಯರ ಸಮಿತಿಯು ಜಿಲ್ಲಾ ವ್ಯಾಪ್ತಿಯಲ್ಲಿ ಮಾನ್ಯ ನ್ಯಾಯಾಲಯದ ಆದೇಶದನ್ವಯ ಕ್ರಮ ಕೈಗೊಂಡಿದ್ದು, ಕರಾವಳಿ ನಿಯಂತ್ರಣ ವಲಯ ವ್ಯಾಪ್ತಿಯಲ್ಲಿ ನೀಡಲಾದ ಚಾಲ್ತಿಯಲ್ಲಿರುವ ಒಟ್ಟು 122 ತಾತ್ಕಾಲಿಕ ಮರಳು ಪರವಾನಿಗೆಗಳನ್ನು ILMS ತಂತ್ರಾಂಶದಲ್ಲಿ ತಡೆಹಿಡಿಯಲು ಮಾನ್ಯ ನಿರ್ದೇಶಕರು, ಗಣಿ ಮತ್ತು ಭೂವಿಜ್ಞಾನ ಇಲಾಖೆ, ಬೆಂಗಳೂರು ರವರಿಗೆ ಪತ್ರದ ಮೂಲಕ ಕೋರಲಾಗಿರುತ್ತದೆ.

ಅದರಂತೆ ILMS ತಂತ್ರಾಂಶದಲ್ಲಿ ಒಟ್ಟು 122 ಪರವಾನಿಗೆಗಳನ್ನು ತಡೆಹಿಡಿದು, ಮರಳು ದಿಬ್ಬ ತೆರವುಗೊಳಿಸುವ ಕಾರ್ಯ ಹಾಗೂ ಮರಳು ಸಾಗಾಣಿಕೆಯನ್ನು ನಿರ್ಭಂದಿಸಲಾಗಿರುತ್ತದೆ ಹಾಗೂ ತಾತ್ಕಾಲಿಕ ಮರಳು ಪರವಾನಿಗೆದಾರರಿಗೆ ಮರಳು ತೆರವುಗೊಳಿಸುವುದನ್ನು ಸ್ಥಗಿತಗೊಳಿಸಿ, ಮರಳು ದಿಬ್ಬ ಪ್ರದೇಶಗಳಿಂದ ಮರಳು ತೆರವುಗೊಳಿಸಲು ಬಳಸುವ ದೋಣಿಗಳನ್ನು ಹಾಗೂ ಮರಳು ದಕ್ಕೆ ಪ್ರದೇಶದಿಂದ ಮರಳು ಸಾಗಾಣಿಕೆಗೆ ಬಳಸುವ ವಾಹನಗಳನ್ನು ತೆರವುಗೊಳಿಸಲು ಸೂಚಿಸಲಾಗಿದೆ.

ಪ್ರಸ್ತುತ ಉಡುಪಿ ಜಿಲ್ಲಾ ವ್ಯಾಪ್ತಿಯ ಕರಾವಳಿ ನಿಯಂತ್ರಣ ವಲಯ ಪ್ರದೇಶದಲ್ಲಿ ಮರಳು ದಿಬ್ಬ ತೆರವುಗೊಳಿಸುವುದನ್ನು ಹಾಗೂ ಸಾಗಾಣಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!