ಉಡುಪಿ: ಮೈಸೂರು ರಂಗಾಯಣದ ರಂಗ ತರಬೇತಿ ಸಂಸ್ಥೆಯಲ್ಲಿ ಒಂದು ವರ್ಷದ ರಂಗಶಿಕ್ಷಣ ಡಿಪ್ಲೋಮಾ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕನಿಷ್ಠ ದ್ವಿತೀಯ ಪಿ.ಯು.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ, 18 ರಿಂದ 28 ವರ್ಷದೊಳಗಿನ ಅಭ್ಯರ್ಥಿಗಳು ಜೂನ್ 17 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ www.rangayana.org ಅಥವಾ ಉಪ ನಿರ್ದೇಶಕರು, ರಂಗಾಯಣ, ಕಲಾಮಂದಿರ ಆವರಣ, ಮೈಸೂರು ದೂ.ಸಂಖ್ಯೆ: 0821-2512639, ಮೊ.ನಂ: 9448938661 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.