ಉಡುಪಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿದ್ಯಾರ್ಥಿ ರಿಯಾಯಿತಿ ದರದ ಪಾಸುಗಳನ್ನು ಪಡೆಯಲು ಸೇವಾ ಸಿಂಧು ಪೋರ್ಟಲ್ https://sevasindhuservices.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
1 ನೇ ತರಗತಿಯಿಂದ ಪಿ.ಯು.ಸಿ ವರೆಗಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವಾಗ ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆಯು ಒದಗಿಸಿರುವ ಎಸ್.ಎ.ಟಿ.ಎಸ್ (ಸ್ಟೂಡೆಂಟ್ ಅಚೀವ್ಮೆಂಟ್ ಟ್ರ್ಯಾಕಿಂಗ್ ಸಿಸ್ಟಮ್) ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕು. ವಿದ್ಯಾರ್ಥಿಯು ಅರ್ಜಿಯಲ್ಲಿ ಅಗತ್ಯವಿರುವ ಮಾಹಿತಿಯನ್ನು ಮತ್ತು ಜೆ.ಪಿ.ಜಿ ಮಾದರಿಯಲ್ಲಿ ಇತ್ತೀಚಿನ ಪಾಸ್ ಪೋರ್ಟ್ ಸೈಜಿನ ಭಾವಚಿತ್ರವನ್ನು ಅಪ್ ಲೋಡ್ ಮಾಡಬೇಕು.
ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸುವಾಗ ವಿಳಾಸ ದೃಢೀಕರಣ ದಾಖಲಾತಿ ಮೂಲಪ್ರತಿ, ಆಧಾರ್ಕಾರ್ಡ್ ಮೂಲಪ್ರತಿ, ವಿದ್ಯಾಸಂಸ್ಥೆಗೆ ಪಾವತಿಸಿದ ಹಣದ ರಶೀದಿಯನ್ನು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಜಿದಾರರು ಜಾತಿ ಪ್ರಮಾಣ ಪತ್ರದ ಮೂಲ ಪ್ರತಿಯನ್ನು ಕಡ್ಡಾಯವಾಗಿ ಅಪ್ಲೋಡ್ ಮಾಡಬೇಕು.
ಹೆಚ್ಚಿನ ಮಾಹಿತಿಗಾಗಿ ಮಂಗಳೂರು ಕ.ರಾ.ರ.ಸಾ.ಸಂ ವಿಭಾಗೀಯ ನಿಯಂತ್ರಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.