ಕುಂದಾಪುರ: ಶೈಕ್ಷಣಿಕ ಬೆಳವಣಿಗೆಯಿಂದ ಒಂದು ಸಮುದಾಯದ ಅಭಿವೃದ್ಧಿ ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ಪೂರಕವಾಗಿ ಸಂಘಟನೆಗಳು ಶ್ರಮಿಸುತ್ತಿರುವುದು ಅಭಿನಂದನೀಯ ಸಂಗತಿ ಎಂದು ನಿವೃತ್ತ ಬಿಎಸ್ಎನ್ಎಲ್ ಇಂಜಿನಿಯರ್ ಅಣ್ಣಪ್ಪ ಬಿಲ್ಲವ ಅಭಿಪ್ರಾಯಪಟ್ಟರು.
ಅವರು ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆಯ ವತಿಯಿಂದ ಶ್ರೀ ಸೀತಾಳಿ ನವದುರ್ಗೆ ಅಮ್ಮನವರ ದೇವಸ್ಥಾನದ ವಠಾರದಲ್ಲಿ ನಡೆದ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸೀತಾಳಿ ನವದುರ್ಗೆ ಅಮ್ಮನವರ ದೇವಸ್ಥಾನದ ಪಾತ್ರಿಗಳಾದ ರಘು ಪೂಜಾರಿ, ಬಿಲ್ಲವ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಗೋಪಾಲ ಪೂಜಾರಿ, ಗಂಗೊಳ್ಳಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೇಮ ಪೂಜಾರಿ, ವೇದಿಕೆ ಸದಸ್ಯರಾದ ಮುತ್ತ ಕುಂದರ್, ಲಕ್ಷ್ಮಣ ಬಿಲ್ಲವ, ಜಗನ್ನಾಥ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
ವೆಂಕಟೇಶ ಕೊಡೇರಿ ಸ್ವಾಗತಿಸಿ, ಜಿ.ಎ.ಆರ್ ಲಕ್ಷ್ಮಣ ಬಿಲ್ಲವ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಒಟ್ಟು 102 ಸ್ಥಳೀಯ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಲಾಯಿತು.