ಮಂಗಳೂರು: ಡಾ. ಪಿ. ದಯಾನಂದ ಪೈ ಪಿ ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು ರಥಬೀದಿ ಮಂಗಳೂರು ಇದರ ನೂತನ ಪ್ರಾಂಶುಪಾಲರಾಗಿ ಡಾ. ಜಯಕರ ಭಂಡಾರಿ ಎಂ ಅಧಿಕಾರ ಸ್ವೀಕರಿಸಿದರು.
ಇವರು 1996 ರಿಂದ ಸಸ್ಯಶಾಸ್ತ್ರ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಅನ್ವಯಿಕ ಸಸ್ಯಶಾಸ್ತ್ರ ವಿಷಯದಲ್ಲಿ ಎಂ.ಎಸ್.ಸಿ, ಎಂ.ಫಿಲ್ ಮತ್ತು ಪಿ.ಹೆಚ್.ಡಿ ಪದವಿ ಪಡೆದಿದ್ದಾರೆ.
ಕರ್ನಾಟಕದ ಕರಾವಳಿ ಜಿಲ್ಲೆಗಳ ಸಸ್ಯವೈವಿಧ್ಯ ಮತ್ತು ಪರಂಪರಾಗತ ಪರಿಸರಜ್ಞಾನದ ಕುರಿತು ಸಂಶೋಧನೆ ನಡೆಸಿದ್ದಾರೆ.
ಜೀವವಿಜ್ಞಾನ, ಸಸ್ಯಶಾಸ್ತ್ರ, ಪರಿಸರ ಅಧ್ಯಯನ, ಸಂವಹನ ಕೌಶಲ್ಯಗಳು ವಿಷಯಗಳ ಬಗ್ಗೆ ಪುಸ್ತಕಗಳನ್ನು ಬರೆದಿರುವ ಇವರು, ಅಂತರಾಷ್ಟ್ರೀಯ ಖ್ಯಾತಿಯ ಪರಿಸರ ವಿಜ್ಞಾನಿ ಪ್ರೊ. ಮಾಧವ ಗಾಡ್ಗಿಳ್ ಬರೆದಿರುವ ‘ಜೀವ ವೈವಿಧ್ಯ’ ಕುರಿತಾದ ಇಂಗ್ಲಿಷ್ ಕೃತಿಯನ್ನು ಕನ್ನಡಕ್ಕೆ ಅನುವಾದ ಮಾಡಿದ್ದಾರೆ.
150 ಕ್ಕೂ ಹೆಚ್ಚು ಜನಪ್ರಿಯ ವಿಜ್ಞಾನ ಲೇಖನಗಳನ್ನು ಬರೆದಿರುವ ಡಾ. ಜಯಕರ ಭಂಡಾರಿ ಎಂ ಇವರು ಕರ್ನಾಟಕ ರಾಜ್ಯ ಜೀವವೈವಿಧ್ಯ ಮಂಡಳಿ, ಕರ್ನಾಟಕ ಸರ್ಕಾರದ ಪಶ್ಚಿಮ ಘಟ್ಟ ಕಾರ್ಯಪಡೆಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.