Friday, September 20, 2024
Friday, September 20, 2024

ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ವಿದ್ಯಾರ್ಥಿ ಸಂಸತ್ತಿನ ಪದಗ್ರಹಣ

ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ವಿದ್ಯಾರ್ಥಿ ಸಂಸತ್ತಿನ ಪದಗ್ರಹಣ

Date:

ಕುಂದಾಪುರ: ವಿದ್ಯಾರ್ಥಿ ದೆಸೆಯಿಂದಲೇ ನಾಯಕತ್ವ ಗುಣವನ್ನು ಬೆಳೆಸಿಕೊಂಡಲ್ಲಿ ಭವಿಷ್ಯದಲ್ಲಿ ಭವ್ಯ ಭಾರತದ ನಿರ್ಮಾಣ ಸಾಧ್ಯ. ವಿದ್ಯಾರ್ಥಿ ಸಂಸತ್ತಿನ ಆಡಳಿತ ಪಕ್ಷದ ಸದಸ್ಯರು ಮತ್ತು ವಿರೋಧ ಪಕ್ಷದ ಸದಸ್ಯರು ಜೊತೆಜೊತೆಯಾಗಿ ಕೈಜೋಡಿಸಿದಲ್ಲಿ ಶಾಲಾ ಸಂಸತ್ತು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಬಲ್ಲದು ಎಂದು ಕುಂದಾಪುರದ ಪುರಸಭೆ ಅಧ್ಯಕ್ಷರಾದ ವೀಣಾ ಭಾಸ್ಕರ ಮೆಂಡನ್ ಹೇಳಿದರು.

ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅಧ್ಯಕ್ಷತೆಯ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಶಾಲೆಗಳ ವಿದ್ಯಾರ್ಥಿ ಸಂಸತ್ತಿನ ಪದಗ್ರಹಣ ಸಮಾರಂಭದ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು. ಪ್ರೌಢ ಶಾಲೆಯ ವಿಭಾಗದ ವಿದ್ಯಾರ್ಥಿ ನಾಯಕಿಯಾಗಿ ಸನ್ಮಿತಾ, ಉಪನಾಯಕನಾಗಿ ಮಹಮ್ಮದ್ ಹುಸೈಫ್ ಹಾಗೂ ಪ್ರಾಥಮಿಕ ಶಾಲಾ ವಿಭಾಗದ ವಿದ್ಯಾರ್ಥಿ ನಾಯಕನಾಗಿ ಸಾತ್ವಿಕ್, ಉಪನಾಯಕಿಯಾಗಿ ಶ್ರೀದೇವಿಯವರೊಂದಿಗೆ ವಿದ್ಯಾರ್ಥಿ ಮಂತ್ರಿ ಮಂಡಲದ ಎಲ್ಲಾ ಸದಸ್ಯರು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ಪ್ರೌಢಶಾಲಾ ಶಿಕ್ಷಕರಾದ ಕ್ಯಾಪ್ಟನ್ ಸುರೇಂದ್ರ ಶೆಟ್ಟಿ ಪ್ರತಿಜ್ಞಾ ವಿಧಿ ಬೋಧಿಸಿದರು. ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡ ಸಂಸ್ಥೆಯ ಪ್ರಾಂಶುಪಾಲರಾದ ಚಿಂತನಾ ರಾಜೇಶ್ ಮಂತ್ರಿ ಮಂಡಲದ ಸದಸ್ಯರಿಗೆ ಶುಭ ಹಾರೈಸಿದರು. ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಶುಭಾ ಕೆ ಎನ್ ಮತ್ತು ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಜಗದೀಶ ಆಚಾರ್ ಸಾಸ್ತಾನ ಅವರ ಮಾರ್ಗದರ್ಶನದಲ್ಲಿ ಚುನಾವಣಾ ಸಮಿತಿಯ ಶಿಕ್ಷಕ ಸದಸ್ಯರ ಸಹಯೋಗದೊಂದಿಗೆ ಪದಗ್ರಹಣ ಸಮಾರಂಭ ಸಂಪನ್ನಗೊಂಡಿತು.

ಪ್ರೌಢಶಾಲಾ ಸಹಾಯಕ ಮುಖ್ಯ ಶಿಕ್ಷಕ ಚಂದ್ರಶೇಖರ್ ಶೆಟ್ಟಿ, ಪ್ರಾಥಮಿಕ ವಿಭಾಗದ ಸಹಾಯಕ ಮುಖ್ಯ ಶಿಕ್ಷಕಿ ಕವಿತಾ ಭಟ್, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಲತಾ ಜಿ. ಭಟ್ ಹಾಗೂ ಎಲ್ಲಾ ಶಿಕ್ಷಕರು, ವಿದ್ಯಾರ್ಥಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ದಿಯಾ ಸಾಜನ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!