Friday, September 20, 2024
Friday, September 20, 2024

ಭಾಷೆ ಬೆಳವಣಿಗೆಗೆ ಹೊಸ ಸಾಧ್ಯತೆಗಳ ಪ್ರಯೋಗ ಅತ್ಯಗತ್ಯ: ರಾಮಚಂದ್ರ ಐತಾಳ್ ಗುಂಡ್ಮಿ

ಭಾಷೆ ಬೆಳವಣಿಗೆಗೆ ಹೊಸ ಸಾಧ್ಯತೆಗಳ ಪ್ರಯೋಗ ಅತ್ಯಗತ್ಯ: ರಾಮಚಂದ್ರ ಐತಾಳ್ ಗುಂಡ್ಮಿ

Date:

ಕೋಟ: ಭಾಷೆಗಳ ಬೆಳವಣಿಗೆಗೆ ಹೊಸ ಸಾಧ್ಯತೆಗಳ ಪ್ರಯೋಗ ಅತ್ಯಗತ್ಯ. ಭಾಷೆಯ ಬಗ್ಗೆ ಕೀಳರಿಮೆ ತೋರದೆ ಅವಕಾಶವಿದ್ದಾಗ ಸಮರ್ಪಕವಾಗಿ ನಮ್ಮ ಭಾಷೆ ಬಳಸಿದಾಗ ಉನ್ನತೀಕರಣ ಸಾಧ್ಯ. ಕುಂದಾಪ್ರ ಭಾಷೆಗೆ ತನ್ನದೇ ಆದ ಹಿರಿಮೆವಿದೆ.

ಗಮ್ಜಾಲ್ ತಂಡದವರ ಹರಟೆ ಸರಣಿ ಕಾರ್ಯಕ್ರಮ ಕುಂದಾಪ್ರ ಭಾಷೆಯ ಸೊಗಡನ್ನು ಮೂಲೆ ಮೂಲೆಗೂ ಪಸರಿಸಲು ಒಂದು ಉತ್ತಮ ಪ್ರಯತ್ನ. ಇವರ ಕಾರ್ಯ ಶ್ಲಾಘನೀಯ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಬ್ರಹ್ಮಾವರ ತಾಲೂಕು ಅಧ್ಯಕ್ಷ ರಾಮಚಂದ್ರ ಐತಾಳ್ ಅವರು ಹೇಳಿದರು.

ಅವರು ಡಾ. ಶಿವರಾಮ ಕಾರಂತ ಪ್ರತಿಷ್ಠಾನ (ರಿ.) ಕೋಟ, ಡಾ. ಕಾರಂತ ಟ್ರಸ್ಟ್ (ರಿ.) ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ಆಶ್ರಯದಲ್ಲಿ ಯು ಚಾನೆಲ್ ಸಹಯೋಗದಲ್ಲಿ ಕುಂದಾಪ್ರ ಭಾಷೆಯ ಹರಿವಿಗಾಗಿ ಸರಣಿ ಕಾರ್ಯಕ್ರಮ ಹರಟೆ ಗಮ್ಜಾಲ್-2022 (ಮಾತಿನ ತಿರ್ಗಣಿ) ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್, ಉಪಾಧ್ಯಕ್ಷ ವಾಸು ಪೂಜಾರಿ, ಸಾಹಿತ್ಯಿಕ-ಸಾಂಸ್ಕೃತಿಕ ಚಿಂತಕರಾದ ಜ್ಯೋತಿ ಸಾಲಿಗ್ರಾಮ, ಸುಮಿತ್ರ ಐತಾಳ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಸ್ವಾಗತಿಸಿ ಪ್ರಸ್ತಾಪಿಸಿದರು. ಟ್ರಸ್ಟಿ ಸತೀಶ್ ವಡ್ಡರ್ಸೆ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!