Saturday, September 21, 2024
Saturday, September 21, 2024

ಕೈಗಾರಿಕ ಕ್ಷೇತ್ರದಲ್ಲಿ ಸ್ವಾವಲಂಬನೆ ಹಾಗೂ ದೇಶದ ಪ್ರಗತಿ: ಲಾಲಾಜಿ ಮೆಂಡನ್

ಕೈಗಾರಿಕ ಕ್ಷೇತ್ರದಲ್ಲಿ ಸ್ವಾವಲಂಬನೆ ಹಾಗೂ ದೇಶದ ಪ್ರಗತಿ: ಲಾಲಾಜಿ ಮೆಂಡನ್

Date:

ಉಡುಪಿ: ನಮ್ಮ ದೇಶಕ್ಕೆ ಈ ಹಿಂದೆ ಶೇ. 70 ರಷ್ಟು ಯುದ್ಧ ಸಾಮಾಗ್ರಿಗಳ ಬಿಡಿ ಭಾಗವನ್ನು ನಾವು ವಿದೇಶದಿಂದ ಆಮದು ಮಾಡಿಕೊಳ್ಳುತ್ತಿದ್ದೆವು. ಆದರೆ, ಇತ್ತೀಚಿನ ದಿನಗಳಲ್ಲಿ ಬಾರತೀಯ ಕೈಗಾರಿಕಾ ಸಂಸ್ಥೆಗಳಿಂದಲೇ ಸೇನಾ ಸಾಮಾಗ್ರಿಗಳು ಹಾಗೂ ಇತರ ಕೈಗಾರಿಕಾ ಬಿಡಿ ಭಾಗಗಳನ್ನು ತಯಾರಿಸುತ್ತಿರುವುದರಿಂದ ಕೈಗಾರಿಕರಣ ಕ್ಷೇತ್ರದಲ್ಲಿ ದೇಶವು ಪ್ರಗತಿಯತ್ತ ಸಾಗುವುದನ್ನು ತಿಳಿಸುತ್ತದೆ ಎಂದು ಶಾಸಕ ಲಾಲಾಜಿ ಆರ್ ಮೆಂಡನ್ ತಿಳಿಸಿದರು.

ಅವರು ಇಂದು, ತಂತ್ರಜ್ಞಾನ ಕೇಂದ್ರಗಳಾಗಿ ಉನ್ನತೀಕರಿಸಿರುವ 150 ಐ.ಟಿ.ಐ ಗಳ ಲೋಕಾರ್ಪಣೆ ಯೋಜನೆಯನ್ನು ಉದ್ಘಾಟಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವರ್ಚುವಲ್ ಕಾರ್ಯಕ್ರಮವನ್ನು, ಮಣಿಪಾಲದ ಪ್ರಗತಿ ನಗರದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೈಗಾರಿಕಾ ಕ್ಷೇತ್ರಕ್ಕೆ ಬೇಕಾದ ಬೆಂಬಲವನ್ನು ಸರ್ಕಾರ ಈಗಾಗಲೇ ನೀಡುತ್ತಿದ್ದು, ಜಿಲ್ಲೆಯ ಸರ್ಕಾರಿ ಕೈಗಾರಿಕಾ ಸಂಸ್ಥೆಗೆ ಇನ್ನೂ ಹೆಚ್ಚಿನ ಆಧುನಿಕ ಸೌಕರ್ಯಗಳು ಬೇಕಾಗಿದ್ದು, ಸರಕಾರದಿಂದ ನೀಡುವ ಭರವಸೆ ನೀಡಿದರು.

ಕೈಗಾರಿಕ ತರಬೇತಿ ಕ್ಷೇತ್ರದ ಬಗ್ಗೆ ವಿದ್ಯಾರ್ಥಿಗಳಲ್ಲಿ ಹಾಗೂ ಪೋಷಕರಲ್ಲಿ ಮಾಹಿತಿಯ ಕೊರತೆ ಇದ್ದು, ಈ ಕ್ಷೇತ್ರಕ್ಕೆ ಅಧ್ಯಯನ ಮಾಡಲು ಬರುವ ವಿದ್ಯಾರ್ಥಿಗಳ ಸಂಖ್ಯೆ ತೀರಾ ಕಡಿಮೆ ಇದೆ. ಇದರ ಬಗ್ಗೆ ಸಾರ್ವಜನಿಕರಲ್ಲಿ ಸಾಕಷ್ಟು ಅರಿವು ಮೂಡಿಸುವುದು ಅನಿವಾರ್ಯವಾಗಿದೆ. ವಿದ್ಯಾರ್ಥಿಗಳು ವಿದ್ಯಾಬ್ಯಾಸ ಮುಗಿಸಿದ ಕೂಡಲೇ ಉದ್ಯೋಗ ದೊರೆಯುವ ಕ್ಷೇತ್ರದಲ್ಲಿ ಒಂದಾಗಿದೆ.

ಪ್ರಸ್ತುತ ದಿನಗಳಲ್ಲಿ ಎಲೆಕ್ಟಾನಿಕ್ ವಾಹನಗಳಿಗೆ ಭಾರೀ ಬೇಡಿಕೆ ಇದ್ದು, ಈ ನಿಟ್ಟಿನಲ್ಲಿ ಐ.ಟಿ.ಐ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯವಿದೆ ಎಂದ ಅವರು ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯುವಲ್ಲಿ ಅನುಕೂಲವಾಗಲೆಂದು ಅನೇಕ ಯೋಜನೆಗಳನ್ನು ಸರಕರ ರೂಪಿಸಿದೆ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು.

ಸರಕಾರಿ ಕೈಗಾರಿಕ ಸಂಸ್ಥೆಯ ಸದಸ್ಯ ಗುಜ್ಜಾಡಿ ಪ್ರಭಾಕರ ನಾಯಕ್ ಮಾತನಾಡಿ, ಯುವಕರಿಗೆ ಉದ್ಯೋಗ ಕಲ್ಪಿಸುವ ಯೋಜನೆಯಲ್ಲಿ ಸರಕಾರ ಐ.ಟಿ.ಐ ಸಂಸ್ಥೆಗಳನ್ನು ಅಭಿವೃದ್ಧಿ ಪಡಿಸುತ್ತಿದೆ. ವಿದ್ಯಾರ್ಥಿಗಳೂ ಕೂಡ ಸಾಕಷ್ಟು ಸಂಖ್ಯೆಯಲ್ಲಿ ಕೈಗಾರಿಕಾ ಕ್ಷೇತ್ರದಲ್ಲಿ ವಿದ್ಯಾಭ್ಯಾಸವನ್ನು ಮಾಡಿದರೇ ದೇಶದ ಅಭಿವೃದ್ಧಿ ಕೂಡ ಸಾಧ್ಯ ಎಂದರು.

ಹೊಸ ಆವಿಷ್ಕಾರದ, ತಾಂತ್ರಿಕತೆಯ ಹಾಗೂ ಹೊಸತನದ ಬಗ್ಗೆ ವಿದ್ಯಾರ್ಥಿಗಳಿಗೆ ತರಬೇತಿ ನೀಡಬೇಕು. ಇದರಿಂದ ಅನ್ವೇಷಣೆಗಳು ಹೆಚ್ಚಾದಂತೆ ಯುವಕರು ಉದ್ಯೋಗಸ್ಥರಾಗುತ್ತಾರೆ. ಶಿಕ್ಷಣದ ಉದ್ದೇಶ ಕೇವಲ ಕಲಿಕೆಯಲ್ಲದೇ ಮುಖ್ಯವಾಗಿ ಯುವ ಜನಾಂಗಕ್ಕೆ ಉದ್ಯೋಗ ನೀಡುವುದು ಎಂದು ತಿಳಿಸಿದರು.

ಸರಕಾರಿ ಕೈಗಾರಿಕ ತರಬೇತಿ ಸಂಸ್ಥೆಯ ಸದಸ್ಯ ವಿಶ್ವನಾಥ ಭಟ್, ಐ.ಟಿ.ಐ ಸಂಸ್ಥೆಗೆ ಸುಸಜ್ಜಿತ ಹಾಸ್ಟೆಲ್, ಉತ್ತಮ ರಸ್ತೆ ಸಂಪರ್ಕ ಹಾಗೂ ಬಸ್ ವ್ಯವಸ್ಥೆಗಳ ಮಾಡುವ ಕುರಿತು ಶಾಸಕರಿಗೆ ಮನವಿ ನೀಡಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಸದಸ್ಯ ರಾಮಕೃಷ್ಣ ಪೈ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್, ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲ ಜಗದೀಶ್ ಸ್ವಾಗತಿಸಿ, ಸತೀಶ್ ನಿರೂಪಿಸಿ, ಶಿಕ್ಷಕಿ ಅನಿತಾ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಕರ್ಮ ಯೋಜನೆಯ ಲಾಭ ಪಡೆದು ಕುಶಲಕರ್ಮಿಗಳು ಉದ್ಯಮಿಗಳಾಗಬಹುದು: ಪ್ರಧಾನಿ ನರೇಂದ್ರ ಮೋದಿ

ವಾರ್ಧಾ, ಸೆ.21: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಲಾಭ ಪಡೆಯುವ ಮೂಲಕ ಕುಶಲಕರ್ಮಿಗಳು...

ಭ್ರಷ್ಟಾಚಾರ ಪ್ರಕರಣ: ಲಾಲು ಪ್ರಸಾದ್ ಯಾದವ್ಗೆ ಸಿಬಿಐ ಬಿಸಿ

ನವದೆಹಲಿ, ಸೆ.21: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮತ್ತು ಮಾಜಿ...

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...
error: Content is protected !!