ಬೆಂಗಳೂರು: ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಶಿಕ್ಷಣ ಶಿಬಿರದ ಸಮಾರೋಪ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ. ಪಿ. ನಡ್ಡಾ ರವರನ್ನು ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರಾದ ಡಾ. ಲಕ್ಷ್ಮಣ್ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ ಬೆಳ್ಳಿ ದೋಣಿಯ ಸ್ಮರಣಿಕೆ ನೀಡಿ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಯಶ್ಪಾಲ್ ಸುವರ್ಣ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಹಿಂದುಳಿದ ವರ್ಗಗಳ ಸಮಗ್ರ ಅಭಿವೃದ್ಧಿಗೆ ಕೈಗೊಂಡ ಯೋಜನೆ ಹಾಗೂ ಹಿಂದುಳಿದ ವರ್ಗಗಳನ್ನು ಸಮಾಜದ ಮುಖ್ಯವಾಹಿನಿಗೆ ಬರಲು ಅವಕಾಶ ಕಲ್ಪಿಸಿದ ಪಕ್ಷದ ನಿಲುವುಗಳನ್ನು ಸ್ವಾಗತಿಸಿ ರಾಷ್ಟ್ರೀಯ ಅಧ್ಯಕ್ಷರಿಗೆ ಸನ್ಮಾನಿಸಿರುವುದಾಗಿ ತಿಳಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಸಿಂಗ್, ಸಿ ಟಿ ರವಿ, ಹಿಂದುಳಿದ ವರ್ಗಗಳ ಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.