Saturday, September 21, 2024
Saturday, September 21, 2024

ಮಣಿಪಾಲ ಇನ್‌ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ, ಸಾಧಕರಿಗೆ ಸನ್ಮಾನ

ಮಣಿಪಾಲ ಇನ್‌ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ, ಸಾಧಕರಿಗೆ ಸನ್ಮಾನ

Date:

ಉಡುಪಿ: ಮಣಿಪಾಲ ಇನ್ ಹೊಟೇಲ್ ಮತ್ತು ಕನ್ವೆನ್ಷನ್ ಸೆಂಟರ್ ವತಿಯಿಂದ ಸಾಧಕರಿಗೆ ಸನ್ಮಾನ ಸಮಾರಂಭವನ್ನು ರವಿವಾರ ಹೊಟೇಲಿನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ಶಾಸಕ ಕೆ.ರಘುಪತಿ ಭಟ್ ಮಾತನಾಡಿ, ಉಡುಪಿ ಜಿಲ್ಲೆಯು ಶಿಕ್ಷಣದಲ್ಲಿ ಸಾಕಷ್ಟು ಪ್ರಗತಿ ಸಾಧಿಸಲು ಇಲ್ಲಿನ ಶಿಕ್ಷಕರ ಬದ್ಧತೆಯೇ ಕಾರಣ. ಶಿಕ್ಷಕ ವೃತ್ತಿಗಿಂತ ಸೇವೆ ಎಂಬ ಭಾವನೆಯಲ್ಲಿ ಅವರು ಕಾರ್ಯನಿರ್ವಹಿಸುತ್ತಿದ್ದಾರೆ. ಇದರ ಪರಿಣಾಮವಾಗಿ ಸರಕಾರಿ ಶಾಲೆಗಳು ಗುಣಮಟ್ಟದ ಶಿಕ್ಷಣದಲ್ಲಿ ಖಾಸಗಿ ಶಾಲೆಗಿಂತ ಮುಂದುವರೆಯುವಂತಾಗಿದೆ ಎಂದು ಹೇಳಿದರು.

ಮಂಗಳೂರು ಶಾಸಕ ಯು.ಟಿ.ಖಾದರ್ ಮಾತನಾಡಿ, ಪ್ರತಿಭಾವಂತ ವಿದ್ಯಾರ್ಥಿಗಳು ಕೇವಲ ತಮ್ಮ ತಂದೆತಾಯಿಯವರ ಆಸ್ತಿಯಾಗಿರದೆ ದೇಶದ ಸಂಪತ್ತು ಆಗಬೇಕು. ಆ ನಿಟ್ಟಿನಲ್ಲಿ ಉನ್ನತ ಸ್ಥಾನಕ್ಕೆ ಹೋಗಿ ಜನರ ಪ್ರೀತಿಯನ್ನು ಗಳಿಸಿ ಕೊಳ್ಳಬೇಕು. ಎಲ್ಲ ಧರ್ಮಗಳ ಸಾರ ಒಂದೇ ಆಗಿದ್ದು, ಪ್ರೀತಿ, ವಿಶ್ವಾಸ, ಸಹೋದರತ್ವವನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಮಾದರಿಯಾಗಿವೆ ಎಂದು ತಿಳಿಸಿದರು. ‘

ಈ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳಾದ ಪುನೀತ್ ನಾಯಕ್, ಆಯೇಷಾ ಅಜ್ವಾ, ನೇಹಾ ನೆಲರಿಯ ಕೋತ ಮತ್ತು ನೇತ್ರ ವಿಜ್ಞಾನ ಕ್ಷೇತ್ರದ ಸಾಧಕ ಡಾ. ರೋಹಿತ್ ಶೆಟ್ಟಿ ಹಾಗೂ ಮಣಿಪಾಲ ಕೆಎಂಸಿಯಲ್ಲಿ 2019ರ ಚಿನ್ನದ ಪದಕ ವಿಜೇತ ಡಾ. ಸೂಫಿಯನ್ ಇಬ್ರಾಹಿಂ ಅವರನ್ನು ಸನ್ಮಾನಿಸಲಾಯಿತು.

ಅದೇ ರೀತಿ ಮಣಿಪಾಲ ಕೆಎಂಸಿಯ ಡೀನ್ ಡಾ.ಶರತ್ ರಾವ್, ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್, ಹೊಟೇಲಿನ ಜನರಲ್ ಮೆನೇಜರ್ ಡಾ. ರಾಮದಾಸ್ ಪ್ರಭು, ವಿದ್ಯಾರ್ಥಿನಿ ಪ್ರಜ್ಞಾ ಪ್ರಶಾಂತ್ ಅವರನ್ನು ಗೌರವಿಸಲಾಯಿತು.

ಅಧ್ಯಕ್ಷತೆಯನ್ನು ಉದ್ಯಮಿ ಗುರ್ಮೆ ಸುರೇಶ್ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿದರು. ಮಣಿಪಾಲ ಇನ್ ಇದರ ಆಡಳಿತ ನಿರ್ದೇಶಕ ಇಬ್ರಾಹಿಂ ಮೌಲಾನ ಸ್ವಾಗತಿಸಿದರು. ಮಾರುಕಟ್ಟೆ ವಿಭಾಗದ ಇಲ್ಯಾಸ್ ಕಾಪು ವಂದಿಸಿದರು. ಪ್ರಶಾಂತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!