ಗಂಗೊಳ್ಳಿ: ಪ್ರಕೃತಿಯ ಜೊತೆಗಿನ ಸಾಮರಸ್ಯದಿಂದ ನಮ್ಮ ಬದುಕು ಸುಂದರವಾಗುತ್ತದೆ. ಆ ನಿಟ್ಟಿನಲ್ಲಿ ವನಮಹೋತ್ಸವದಂತಹ ಆಚರಣೆಗಳು ನಮ್ಮ ನಿತ್ಯದ ಬದುಕಿನ ಅಂಗವಾಗಬೇಕು ಎಂದು ಕುಂದಾಪುರದ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕಿ ಡಾ. ಸರೋಜಾ ಅಭಿಪ್ರಾಯಪಟ್ಟರು.
ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮದ ಸಭಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಸರಸ್ವತಿ ವಿದ್ಯಾಲಯದ ಪ್ರಾಂಶುಪಾಲೆ ಕವಿತಾ ಎಂ. ಸಿ ಅಧ್ಯಕ್ಷತೆ ವಹಿಸಿದ್ದರು. ಎನ್ಎಸ್ಎಸ್ ವಿದ್ಯಾರ್ಥಿ ನಾಯಕ ಆಕಾಶ ಉಪಸ್ಥಿತರಿದ್ದರು.
ಇತಿಹಾಸ ಉಪನ್ಯಾಸಕ ಭಾಸ್ಕರ್ ಶೆಟ್ಟಿ ಪ್ರಸ್ತಾವಿಕ ಮಾತುಗಳನ್ನಾಡಿದರು. ಮಹಿಮಾ ಸ್ವಾಗತಿಸಿ, ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಸುಗುಣ ಆರ್ ಕೆ ವಂದಿಸಿದರು. ಶ್ರೇಯ ಖಾರ್ವಿ ನಿರೂಪಿಸಿದರು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ಗಿಡಗಳನ್ನು ವಿತರಿಸಲಾಯಿತು ಮತ್ತು ಸಸಿಗಳನ್ನು ನೆಡಲಾಯಿತು.