Wednesday, November 27, 2024
Wednesday, November 27, 2024

ಉತ್ತಮ ಹವ್ಯಾಸ ಮತ್ತು ಆದರ್ಶಗಳನ್ನು ಅಳವಡಿಸಿಕೊಳ್ಳಿ: ಡಾ. ಗೋಪಾಲಕೃಷ್ಣ ಎಂ. ಗಾಂವ್ಕರ್

ಉತ್ತಮ ಹವ್ಯಾಸ ಮತ್ತು ಆದರ್ಶಗಳನ್ನು ಅಳವಡಿಸಿಕೊಳ್ಳಿ: ಡಾ. ಗೋಪಾಲಕೃಷ್ಣ ಎಂ. ಗಾಂವ್ಕರ್

Date:

ಮಲ್ಪೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಇಲ್ಲಿನ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರವು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಗರಡಿಮಜಲು ಇಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬದುಕಿನ ಯಶಸ್ಸಿಗೆ ಜೀವನ ಕೌಶಲ್ಯಗಳು ಎಂಬ ವಿಷಯದ ಕುರಿತಾಗಿ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಉಡುಪಿಯ ಮಾನವ ಸಂಪನ್ಮೂಲ ಸಲಹೆಗಾರರು ಮತ್ತು ಜೀವನ ಕೌಶಲ್ಯ ತರಬೇತುದಾರರಾದ ಜ್ಯೋತಿ ಪ್ರಶಾಂತ್ ಮಾತನಾಡಿ, ಪ್ರಸ್ತುತ ಜನರ ಆಧುನಿಕ ಬದುಕು ಯಾಂತ್ರಿಕವಾಗಿದ್ದು, ಜೀವನದ ಮೌಲ್ಯಗಳನ್ನು ಕಳೆದುಕೊಂಡು, ಮನುಷ್ಯ ದೈಹಿಕವಾಗಿ ತೊಂದರೆ ಪಡುವುದಕ್ಕಿಂತ ಮಾನಸಿಕವಾಗಿ ತೊಂದರೆಗಳನ್ನು ಅನುಭವಿಸುತ್ತಾನೆ. ಈ ನಿಟ್ಟಿನಲ್ಲಿ ತಮ್ಮ ನಕಾರಾತ್ಮಕ ಭಾವನೆಗಳನ್ನು ಹತೋಟಿಯಿಂದ ಜೀವಿಸುವುದು ಅಗತ್ಯವಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥರಾದ ಡಾ. ಗೋಪಾಲಕೃಷ್ಣ ಎಂ. ಗಾಂವ್ಕರ್, ಉತ್ತಮ ಹವ್ಯಾಸ ಮತ್ತು ಆದರ್ಶಗಳನ್ನು ಅಭ್ಯಸಿಸಿ ಅದನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು, ತಮ್ಮ ದೈನಂದಿನ ಬದುಕಿನಲ್ಲಿ ಸಂಭವಿಸುವ ವಾಸ್ತವ ಅಂಶಗಳನ್ನು ಸಕಾರಾತ್ಮಕವಾಗಿ ಸ್ವೀಕರಿಸಲು ತಮ್ಮ ದೃಷ್ಟಿಕೋನವನ್ನು ಬದಲಾಯಿಸಿದಲ್ಲಿ ಪ್ರತಿಯೊಬ್ಬರ ನೆಮ್ಮದಿ ಜೀವನಕ್ಕೆ ನಾಂದಿಯಾಗವಹುದು ಎಂದು ಹೇಳಿದರು.

ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ರೋಶನ್ ಕುಮಾರ್ ಜಿ, ಎನ್.ಎಸ್.ಎಸ್. ಯೋಜನಾಧಿಕಾರಿಗಳಾದ ಸುಷ್ಮಾ ಟಿ. ಹಾಗೂ ಡಾ. ಮಹೇಶ್ ಕುಮಾರ್ ಕೆ.ಇ. ಉಪಸ್ಥಿತರಿದ್ದರು. ಶಿಬಿರಾರ್ಥಿ ಶ್ರಾವ್ಯ ಸ್ವಾಗತಿಸಿ, ಕೀರ್ತನಾ ವಂದಿಸಿದರು. ಚೈತ್ರಾ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಕಲಚೇತನರ ಸಪ್ತಾಹ ಉದ್ಘಾಟನೆ

ಉಡುಪಿ, ನ.26: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ...

ನಗರದ ಸ್ವಚ್ಛತೆಗೆ ಪೌರಕಾರ್ಮಿಕರ ಕೊಡುಗೆ ಅಮೂಲ್ಯ: ಶಾಸಕ ಯಶ್‌ಪಾಲ್ ಎ ಸುವರ್ಣ

ಉಡುಪಿ, ನ.26: ಸ್ವಚ್ಛತೆಯಲ್ಲಿ ಉಡುಪಿಯು ರಾಷ್ಟ್ರಮಟ್ಟದಲ್ಲಿ ಗುರುತಿಸಲು ಕಾರಣ ಜಿಲ್ಲೆಯ ಪೌರಕಾರ್ಮಿಕರು....

ರಥಬೀದಿ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಮಂಗಳೂರು, ನ.26: ಡಾ. ಪಿ. ದಯಾನಂದ ಪೈ-ಪಿ.ಸತೀಶ್ ಪೈ. ಸರ್ಕಾರಿ ಪ್ರಥಮ...

ಆಳ್ವಾಸ್ ಕಾಲೇಜಿನಲ್ಲಿ ಸಿನಿಮಾ ರಸಗ್ರಹಣ ಕಾರ್ಯಾಗಾರ

ವಿದ್ಯಾಗಿರಿ, ನ.26: ಗಾಳಿ, ನೀರು, ಅಗ್ನಿಯಷ್ಟೇ ‘ದೃಶ್ಯ-ಶ್ರವ್ಯ ಮಾಧ್ಯಮ’ವೂ ಬದುಕಿನ ಅವಿಭಾಜ್ಯ...
error: Content is protected !!