ಬೆಂಗಳೂರು: ಇಂದಿನಿಂದ ನಾಲ್ಕು ದಿನಗಳ ಕಾಲ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸಾಧರಣದಿಂದ ಅಧಿಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಲೆನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಜುಲೈ 2 ರಿಂದ 4 ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಹಾಸನ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಜುಲೈ 1 ರಿಂದ ನಾಲ್ಕು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.