Thursday, September 19, 2024
Thursday, September 19, 2024

ಮಹಾರಾಷ್ಟ್ರದ 20ನೇ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಪ್ರಮಾಣ ವಚನ ಸ್ವೀಕಾರ

ಮಹಾರಾಷ್ಟ್ರದ 20ನೇ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಪ್ರಮಾಣ ವಚನ ಸ್ವೀಕಾರ

Date:

ಮುಂಬಯಿ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಶಿವಸೇನೆ ಬಂಡಾಯ ನಾಯಕ ಏಕನಾಥ್ ಶಿಂಧೆ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ಶಿಂಧೆ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಅವರು ರಾಜ್ಯದ 20ನೇ ಮುಖ್ಯಮಂತ್ರಿಯಾಗಿದ್ದಾರೆ. ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಪ್ರಧಾನಿ ಅಭಿನಂದನೆ: 
ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಏಕನಾಥ್ ಶಿಂಧೆಗೆ ಅಭಿನಂದನೆಗಳು. ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಶಿಂಧೆಯವರು ತಳಮಟ್ಟದ ನಾಯಕರು. ರಾಜಕೀಯ, ಶಾಸಕಾಂಗ ಮತ್ತು ಆಡಳಿತಾತ್ಮಕ ವಿಚಾರಗಳ ಬಗ್ಗೆ ಅಗಾಧ ಅನುಭವವನ್ನು ಹೊಂದಿರುವ ಶಿಂಧೆ, ಮಹಾರಾಷ್ಟ್ರವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲು ಶ್ರಮಿಸುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಮ್ಮು ಕಾಶ್ಮೀರ: ಮೊದಲ ಹಂತದ ಮತದಾನ ಮುಕ್ತಾಯ; 35 ವರ್ಷಗಳಲ್ಲೇ ಅತಿ ಹೆಚ್ಚು ಮತದಾನ

ನವದೆಹಲಿ, ಸೆ.18: ಜಮ್ಮು ಮತ್ತು ಕಾಶ್ಮೀರವು ಕಳೆದ 35 ವರ್ಷಗಳಲ್ಲಿ ಅತಿ...

ಅತಿ ಉದ್ದದ ಮಾನವ ಸರಪಳಿ ನಿರ್ಮಾಣ- ಉಡುಪಿ ಜಿಲ್ಲೆ ಪ್ರಥಮ

ಬೆಂಗಳೂರು, ಸೆ.18: ಮಾನವ ಸರಪಳಿ ಕಾರ್ಯಕ್ರಮದಲ್ಲಿ ರಾಜ್ಯದ 31 ಜಿಲ್ಲೆಗಳ ಪೈಕಿ...

ಗ್ರಾಮ ಪಂಚಾಯತ್ ಗಳಲ್ಲಿ ಸೌರ ಬೀದಿ ದೀಪಗಳ ಅಳವಡಿಕೆ

ಬೆಂಗಳೂರು, ಸೆ.18: ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿನ ವಿದ್ಯುತ್‌ ಬಳಕೆ ಮೇಲೆ ನಿಗಾ...

ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ: ಸಾಮಾನ್ಯ ಸಭೆ

ಉಡುಪಿ, ಸೆ.18: ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ...
error: Content is protected !!